ರಾಜಕೀಯ
ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ
ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್ನ ಬಫರ್ ಝೋನ್ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಪರಿಗಣಿಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ
ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ
ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್ ಅಶೋಕ್ ಆಕ್ರೋಶ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ
ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಪ್ರಶ್ನೆ
“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ: ಸಚಿವ ಮಲ್ಲಿಕಾರ್ಜುನ್ ಗೆ ಸಭಾಪತಿ ಹೊರಟ್ಟಿ ಎಚ್ಚರಿಕೆ
ಬೆಂಗಳೂರು:ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮೇಲ್ಮನೆಯಲ್ಲಿ ಮಂಗಳವಾರ ಎಚ್ಚರಿಕೆ ನೀಡಿದರು. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಹನುಮಂತ ನಿರಾಣಿ
ಕೇಂದ್ರ ಸಚಿವ ಆಗಿದ್ದರೂ ನೋಟಿಸ್ ಕೊಡದೇ ಜಮೀನು ಒತ್ತುವರಿ ತೆರವು: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಗೆ ತೆರಳುವ ಮುನ್ನ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ
ದರ ಏರಿಕೆಯೊಂದಿಗೆ ನಂದಿನಿ ಹಾಲು ಪ್ರಮಾಣ ಕಡಿತ
ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಮಾಡಲು ಮುಂದಾಗಿರುವ ಕೆಎಂಎಫ್ ಜತೆಯಲ್ಲೇ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣ ಕೂಡ ಕಡಿತ ಮಾಡಲಿದೆ. ಈ ಹಿಂದೆ ಅರ್ಧ ಹಾಗೂ 1 ಲೀಟರ್ ಹಾಲಿಗೆ 50 ಎಂಎಲ್ ಮತ್ತು 100 ಎಂಎಲ್ ಹಾಲು ಹೆಚ್ಚಳ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ: ನಿಯಮ ಉಲ್ಲಂಘನೆಗೆ ದಂಡಾಸ್ತ್ರ
ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ರಲ್ಲಿ ನಿಯಮಗಳ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಕುರಿತು ಉಲ್ಲೇಖಿಸಲಾಗಿದೆ. ನಿಯಮ ಉಲ್ಲಂಘಕರ ವಿರುದ್ಧ ‘ದಂಡಾಸ್ತ್ರ’ ಪ್ರಯೋಗಿಸುವ ವಿವರಗಳನ್ನು ನಮೂದಿಸಲಾಗಿದೆ. ಹಾಗಾಗಿ ಹಾಲಿ ಇರುವ ಬಿಬಿಎಂಪಿ ಕಾಯಿದೆ-2020ರ ನಿಯಮಗಳನ್ನು ಹಗುರವಾಗಿ ಪರಿಗಣಿಸಿದಂತೆ ಸಾರ್ವಜನಿಕರು
ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ
“ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳಿಗೆ




