Menu

ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ 38 ಕ್ಕೆ: ಲೋಕಸಭೆಯಲ್ಲಿ ಮಸೂದೆ ಮಂಡನೆ

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭಗೊಂಡಿದ್ದು, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ತಿದ್ದುಪಡಿ ಮಸೂದೆ, 2026’ ಮಂಡಿಸಿದ್ದಾರೆ. ಮಸೂದೆಯು 1956 ರ ಸುಪ್ರೀಂ ಕೋರ್ಟ್ ಕಾಯ್ದೆಗೆ ತಿದ್ದುಪಡಿ ತರಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 34 ರಿಂದ 38 ಕ್ಕೆ ಏರಿಕೆಯಾಗಲಿದೆ. ಈ ಹಿಂದೆ ಕೇಂದ್ರ ಸಚಿವ ಸಂಪುಟವು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು

ಸಂಸದ್‌ ಚಲೊಗೆ ಮುಂದಾದ ಸಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡ ಮೊದಲ ದಿನ ನವದೆಹಲಿ ಪ್ರತಿಭಟನೆಯ ಕಾರಣಕ್ಕೆ ಉದ್ವಿಗ್ನಗೊಂಡಿದೆ. ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ಸಂಸದ್‌ ಚಲೊ ಪ್ರಯತ್ನ ನಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ,

ಹೋಂ ಸ್ಟೇ ನೋಂದಣಿ ಕಡ್ಡಾಯಗೊಳಿಸಿದ ಪ್ರವಾಸೋದ್ಯಮ ಇಲಾಖೆ 

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ

ಸರ್ಕಾರಿ ಗೌರವಗಳೊಂದಿಗೆ ಮಾವಿನಕೆರೆಯಲ್ಲಿ ಇಂದು ಚನ್ನಮ್ಮ ಅಂತ್ಯಕ್ರಿಯೆ

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ಅಂತ್ಯ ಸಂಸ್ಕಾರ ಇಂದು ( ಸೋಮವಾರ) ಮಧ್ಯಾಹ್ನ ಹರದನಹಳ್ಳಿಯ ಮಾವಿನಕೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಮಾವಿನಕೆರೆಯಲ್ಲಿ 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ಹಲವು ಜನಪ್ರತಿನಿಧಿಗಳು

15 ದಿನದಲ್ಲಿ ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ

ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯ ಹಾಗೂ ವಿಶೇಷ ಸಚಿವ ಸಂಪುಟಸಭೆಯ ನಂತರ ವಿಧಾನಸೌಧದ ಸಮ್ಮೇಳನ

ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅಂತ್ಯಕ್ರಿಯೆ

ಪದ್ಮನಾಭ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರವನ್ನು ಇಂದು ಭಾನುವಾರ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಕೊಂಡೊಯ್ದು  ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕುಟುಂಬ ತಿಳಿಸಿದೆ.

ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ  ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ

ಸ್ವಾತಂತ್ರ್ಯದಿನಾಚರಣೆ: ಕೆಂಪು ಕೋಟೆಗೆ ಒಂದು ತಿಂಗಳು ಪ್ರವಾಸಿಗರಿಗೆ ನಿರ್ಬಂಧ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸಿದ್ಧತೆಗಳು ಬಿರುಸಾಗಿವೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಜುಲೈ 15 ರಿಂದ ಆಗಸ್ಟ್ 15, 2026 ರವರೆಗೆ ಕೆಂಪು ಕೋಟೆಯನ್ನು ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ