Menu

ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್

ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ

ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್  ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ

ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ

ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ

ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ 

ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ

ಮುಡಾ ಅಕ್ರಮ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಮೇಲ್ಮನವಿ

ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ

ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್

ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ

ಜಾತಿ ರಾಕಾರಣ ನಡೆಯಲ್ಲ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಇÀಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು

ಜೆಡಿಎಸ್‌‍ ಮುಖ್ಯ ಸಚೇತಕ ಜಿ.ಡಿ.ಹರೀಶ್‌ಗೌಡ 

ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ

ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ

ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ