Menu

ಆಳಂದದಲ್ಲಿ ಮತ ಕಳವು ಹೇಗಾಯ್ತು: ಎಸ್‌ಐಟಿ ತನಿಖೆಯಲ್ಲಿ ಬಯಲಾಯ್ತು

ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಹಲವು ಮಹತ್ವದ ವಿಚಾರಗಳು ಬಯಲಾಗಿವೆ. ಮತದಾರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು 6,018 ನಕಲಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಹೆಸರು ಕೈ ಬಿಡಲು ಸಲ್ಲಿಕೆಯಾದ ಒಂದು ಅರ್ಜಿ ಸಂಬಂಧ ಡೇಟಾ ಸೆಂಟರ್‌ಗೆ 80 ರೂಪಾಯಿ ಪಾವತಿಯಾಗಿತ್ತು, ಹೀಗೆ ಡೇಟಾ ಸೆಂಟರ್‌ 4.8 ಲಕ್ಷ ರೂ. ಪಡೆದಿತ್ತು ಎಂಬುದು ಪತ್ತೆಯಾಗಿದೆ. ಮತದಾರನ ಹೆಸರು ಪಟ್ಟಿಯಿಂದ ತೆಗೆದು ಹಾಕಲು ಮೊಹಮ್ಮದ್ ಅಶ್ಫಾಕ್

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವಿಲ್ಲ: ಆರ್‌. ಅಶೋಕ ಕಿಡಿ

ಆಶಾ ಕಾರ್ಯಕರ್ತೆಯರ ಗೌರವಧನ ₹8,000ಕ್ಕೆ ಹೆಚ್ಚಳ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬೊಗಳೆ ಬಿಟ್ಟು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ, ಗೌರವಧನ ಹೆಚ್ಚಿಸುವುದಿರಲಿ, ಕಳೆದ ಮೂರು ತಿಂಗಳಿಂದ ಕೊಡಬೇಕಾದ ಗೌರವಧನವನ್ನೂ ಕೊಟ್ಟಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ.

ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ: ಡಿಕೆ ಶಿವಕುಮಾರ್

“ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ‌ ಹೇಳಿದರು. ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರ ಸಭೆ: ಡಿಸಿಎಂ 

“ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು  ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಒಪ್ಪಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ

ಕಾಂಗ್ರೆಸ್ ಆಡಳಿತಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ: ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ

ಪ್ರಿಯಾಂಕ್‌ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು

ಪ್ರಿಯಾಂಕ್‌ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು

ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್‌. ಅಶೋಕ

ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ

ನವೆಂಬರ್‌ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ

ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು

ಖಾದ್ಯ ತೈಲ ಘಟಕ: ಪಾಲುದಾರರ ನೋಂದಣಿ ಕಡ್ಡಾಯವೆಂದ ಸಚಿವ ಪ್ರಲ್ಹಾದ್ ಜೋಶಿ

ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆ ಕೂಡ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್