Saturday, February 21, 2026
Menu

ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಭಾರತದ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ.ಕೆ‌.ಶಿವಕುಮಾರ್

ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ. ಹುತಾತ್ಮ ಯುವ ಕಾರ್ಯಕರ್ತರ ಹೆಸರಿನಲ್ಲಿ ಸ್ಥಾಪಿಸಲಾಗುವ ಸಾಂಸ್ಕೃತಿಕ ಕೇಂದ್ರಕ್ಕೆ ಕೆಪಿಸಿಸಿ ವತಿಯಿಂದ ₹25 ಲಕ್ಷ ಧನಸಹಾಯ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೇರಳದ ಕಾಸರಗೋಡಿನಲ್ಲಿ ನಡೆದ 6ನೇ ಹುತಾತ್ಮರ ದಿನಾಚರಣೆ ಹಾಗೂ ಸ್ಮರಣೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ

ರೈತರ ಬೇಡಿಕೆಗಳಿಗೆ ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡ ರೊಂದಿಗೆ  2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,  ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ

ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್‌. ಅಶೋಕ್‌ ಟಾಂಗ್‌

ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ

ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್‌

ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು

ಬುರ್ಖಾ ಹಾಕಿಕೊಂಡು ಹೋಗಿ ಗಲಾಟೆ ಮಾಡಿರುವ ವೀಡಿಯೊವಿದೆ ಎಂದ ಬಿಕೆ ಹರಿಪ್ರಸಾದ್‌

ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕಿಕೊಂಡು ಗಲಾಟೆ ಮಾಡಲು ಹೋಗುತ್ತಾರೆ, ಇದೇನು ಹೊಸದಲ್ಲ, ನನ್ನ ಬಳಿ ವೀಡಿಯೊ ಇದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್‌ಗೆ ನೂರು ವರ್ಷ ತುಂಬುತ್ತಿದೆ.

ಪಂಜಾಬ್‌ನಿಂದ ಕುರುಬೂರು ಶಾಂತಕುಮಾ‌ರ್ ಬೆಂಗಳೂರಿಗೆ ಏರ್‌ಲಿಫ್ಟ್‌

ಪಟಿಯಾಲ ಬಳಿ ಶುಕ್ರವಾರ ಕಾರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾ‌ರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ

ಮತ್ತೆ ಕಾಂಗ್ರೆಸ್‌ ಕೈ ಹಿಡಿದ ಎಲ್​.ಆರ್‌ ಶಿವರಾಮೇಗೌಡ

ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಗೆ ಸೇರಿದರು. ಕೆಪಿಸಿಸಿ ಅಧ್ಯಕ್ಷ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ: ಬೊಮ್ಮಾಯಿ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ  ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ