ರಾಜಕೀಯ
ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್. ಅಶೋಕ್
ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ ಕರ್ನಾಟಕದ ಕಾಂಗ್ರೆಸ್
ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ಮರುಸ್ಥಾಪನೆ: ಡಿಕೆ ಶಿವಕುಮಾರ್
ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ
ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ: ಡಿಕೆ ಶಿವಕುಮಾರ್
ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ
ಜೆಪಿ ಪಾರ್ಕ್‌ನಲ್ಲಿ ನಡಿಗೆ, ಸಾರ್ವಜನಿಕ ಅಹವಾಲು ಆಲಿಸಿದ ಡಿಕೆ ಶಿವಕುಮಾರ್, ನನಗೆ ಆಹ್ವಾನವಿಲ್ಲವೆಂದು ಮುನಿರತ್ನ ಕಿರಿಕ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸ್ಪಂದಿಸುವ ಉದ್ದೇಶದಿಂದ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ “ಬೆಂಗಳೂರು ನಡಿಗೆ” ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಗೊಳಪಡುವ ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ್ ಉದ್ಯಾನವನದಲ್ಲಿ ನಾಗರಿಕರ ಜೊತೆ ನಡಿಗೆಯಲ್ಲಿ ಪಾಲ್ಗೊಂಡರು.
ಋತುಚಕ್ರ ರಜೆ ನೀತಿ: ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ
ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಹೇಳಿದರು. ಋತುಚಕ್ರ
ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಪರಿಹಾರ ದರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ ಕೃತಜ್ಞತೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪತ್ರಿಕಾ
ಶಾಸಕ ಪಪ್ಪಿಯ ಎರಡು ಬ್ಯಾಂಕ್ ಲಾಕರ್‌ನಿಂದ 50 ಕೋಟಿ ರೂ. ಬೆಲೆಯ ಚಿನ್ನ ಜಪ್ತಿ
ಆನ್‌ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ನಡೆಸಿದ್ದು, ಚಳ್ಳಕೆರೆಯಲ್ಲಿ ಪಪ್ಪಿಗೆ ಸೇರಿದ ಎರಡು ಬ್ಯಾಂಕ್ ಲಾಕರ್ ಜಪ್ತಿ ಮಾಡಿ 50 ಕೋಟಿ ರೂಪಾಯಿ ಮೌಲ್ಯದ
ಅ.15 ರಿಂದ ಮತ್ತೆ ಸಾರಿಗೆ ನೌಕರರ ಮುಷ್ಕರ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಆಗಸ್ಟ್- 5 ರಂದು ನಾಲ್ಕು ನಿಗಮದ ನೌಕರರು
ರಾಜ್ಯದ ನೀರಾವರಿ ಯೋಜನೆಗೆ ಸರ್ಕಾರ ಬದ್ಧ, ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ: ಡಿಕೆ ಶಿವಕುಮಾರ್
“ನಮ್ಮ ರಾಜ್ಯದ ಪಾಲಿನ ನೀರನ್ನು ನಾವು ಬಳಸಿಕೊಳ್ಳುವ ವಿಚಾರದಲ್ಲಿ ನೆರೆ ರಾಜ್ಯಗಳು ರಾಜಕೀಯ ಮಾಡುತ್ತಿವೆ. ಈ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.




