Menu

ಕರ್ನಾಟಕ ದಿವಾಳಿ ಮಾಡುವುದೇ ಕಾಂಗ್ರೆಸ್‌ ಸರ್ಕಾರದ ಅಜೆಂಡಾ: ಆರ್‌. ಅಶೋಕ್‌

ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಈ ಕಾಂಗ್ರೆಸ್‌ ಸರ್ಕಾರದ ಒನ್‌ ಲೈನ್‌ ಅಜೆಂಡಾ, ಸಾಲ ಮಾಡುವುದನ್ನೇ ಫುಲ್‌ ಟೈಂ ಕಾಯಕ ವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕೆಗಳಲ್ಲಿ

ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಖ್ಯ ಮಾಹಿತಿ ಆಯುಕ್ತ ಸೇರಿದಂತೆ ಎಂಟು ಮಂದಿ ಆಯುಕ್ತರನ್ನು ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಮಾಡಿ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸುಪ್ರೀಂಕೋರ್ಟ್‌ ಆದೇಶ ಪಾಲಿಸದೆ ಈ ನೇಮಕ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೆ.ಪಿ.ನಗರದ ಕೆ.ಮಲ್ಲಿಕಾರ್ಜುನರಾಜು

ಮೃತರ ಸಂಖ್ಯೆ ಮುಚ್ಚಿಡಲು ಶವ ನದಿಗೆಸೆದು ತ್ರಿವೇಣಿ ಸಂಗಮ ಮಲಿನ: ಸಂಸದೆ ಜಯಾ ಬಚ್ಚನ್‌

ಕುಂಭಮೇಳದಲ್ಲಿ  ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ. ಇದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ ಎಂದು ಎಸ್ಪಿ ಸಂಸದೆ ಜಯಾ ಬಚ್ಚನ್‌ ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು,

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳ ಸಮಾಲೋಚನೆ

ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್  ಕಣ್ವ

ಶಾಲಾ ಆವರಣದಲ್ಲೇ ಬಾಲಕಿಯ ಗ್ಯಾಂಗ್‌ ರೇಪ್‌: ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ರಾಜ್ಯದಲ್ಲಿ

 ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇವೆ: ಡಿ. ಕೆ. ಸುರೇಶ್

ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ

ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ

ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಕೆಶಿ

ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ