Wednesday, August 19, 2026
Menu

ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೊತ್ತಿ ಉರಿಯುತ್ತಿದೆ ಲಡಾಖ್‌: ಹಿಂಸಾಚಾರಕ್ಕೆ ನಾಲ್ವರು ಬಲಿ

ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಸಂಘರ್ಷಕ್ಕೆ 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಲಡಾಖ್ ಅಪೆಕ್ಸ್ ಬಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಹಲವು ವಾಹನಗಳು ಸುಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಮತ್ತೆ ಅಮೆರಿಕದಿಂದ ಭಾರತಕ್ಕೆ ಒತ್ತಾಯ

ಭಾರತದ ಜೊತೆಗೆ ಇಂಧನ, ವ್ಯಾಪಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರೊಂದೊಗೆ ಚರ್ಚಿಸಿದ್ದೇನೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ ನಿರ್ಧಾರವನ್ನು ಮರುಪರಿಶೀಲಿಸಬೇಕು. ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸುತ್ತೇನೆ,

ಅಮೆರಿಕದ ದುಬಾರಿ ವೀಸಾಗೆ ಚೀನಾ ತಿರುಮಂತ್ರ

ಅಮೆರಿಕವು ಎಚ್೧ಬಿ ವೀಸಾಗೆ ದುಬಾರಿ ಶುಲ್ಕ ವಿಧಿಸಿದ ಬೆನ್ನಹಿಂದೆಯೇ ಈಗ ಚೀನಾ ಎಚ್ಚೆತ್ತುಕೊಂಡಿದೆ. ಭಾರತದ ಯುವಪ್ರತಿಭೆಗಳನ್ನು ಚಿವುಟಲೆಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಸಗಿರುವ ವೀಸಾ ಆಕ್ರಮಣಕ್ಕೆ ಚೀನಾ ಈಗ ಖಡಕ್ ತಿರುಗೇಟು ನೀಡಿರುವುದು ಗಮನಾರ್ಹ. ಮುಂದಿನ ತಿಂಗಳು ಒಂದರಿಂದಲೇ ಅನ್ವಯವಾಗುವಂತೆ

39 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಹಾರ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಪಟ್ಟಿ ಬಿಡುಗಡೆಯಾಗಿದೆ.

ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್

ರೈತರ ಒಳಿತಿಗಾಗಿ ಕಾವೇರಿ ಮಾತೆಗೆ ಆರತಿ ಪೂಜೆ ನಡೆಸುವ ಕಾರ್ಯಕ್ರಮಕ್ಕೆ ರೈತರ ವಿರೋಧ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು

ರಸ್ತೆ ಗುಂಡಿಗಳಿಗೆ ಬಿಜೆಪಿಯೇ ಕಾರಣ: ಆರ್​. ಅಶೋಕ್ ಆರೋಪಕ್ಕೆ ಪ್ರದೀಪ್ ಈಶ್ವರ್ ತಿರುಗೇಟು

ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ಮಾಣ ಮಾಡಿರುವುದೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿರಲು ಕಾರಣ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವೈಜ್ಞಾನಿಕ ರಸ್ತೆಗಳ ನಿರ್ಮಾಣ

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ: ಬಿ.ವೈ ವಿಜಯೇಂದ್ರ ತಿರುಗೇಟು

ಅನ್ನಭಾಗ್ಯ ಕಾಂಗ್ರೆಸ್ಸಿಗರ ಕಿಸೆಯಿಂದ ಬಂದ ಭಾಗ್ಯವಲ್ಲ. ಪ್ರಧಾನಿ ನರೇಂದ್ರ ಮೋದಿಯವರು ‘ಹಸಿವು ಮುಕ್ತ ಭಾರತ’ಕ್ಕಾಗಿ ತೊಟ್ಟ ಮಹಾ ಸಂಕಲ್ಪದ ಫಲವಾಗಿ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ದೇಶದ ಉದ್ದಗಲಕ್ಕೂ ಬಡವರಿಗೆ ತಲುಪಿದ ‘ಸ್ವಾಭಿಮಾನದ ಭಾಗ್ಯ’, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಜನಾದೇಶ ಕದಿಯುವ ಪ್ರಜಾರಾಜ್ಯದ ಆತ್ಮ ಘಾಸಿಗೊಳಿಸುವ ವ್ಯವಸ್ಥೆಯಿಂದ ರಕ್ಷಣೆ ನೀಡಲು ಕಾಂಗ್ರೆಸ್‌ ಮಾತ್ರ ಶಕ್ತ: ಸಿಎಂ ಸಿದ್ದರಾಮಯ್ಯ

ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ

ಬ್ರ್ಯಾಂಡ್ ಅಲ್ಲ, ಬ್ಯಾಡ್ ಬೆಂಗಳೂರು: ರಸ್ತೆ ಗುಂಡಿ ಮುಚ್ಚುವ ಮೂಲಕ ಬಿಜೆಪಿ ವಿನೂತನ ಪ್ರತಿಭಟನೆ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ದಿನೇದಿನೇ ಹೆಚ್ಚುತ್ತಿದ್ದರೂ ಅವುಗಳನ್ನು ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಬಿಜೆಪಿ ನಗರದೆಲ್ಲೆಡೆ ರಸ್ತೆ ತಡೆ ಪ್ರತಿಭಟನೆ ನಡೆಸಿತು. ಸ್ಥಳೀಯ ನಾಯಕರ ನೇತೃತ್ವದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ರಸ್ತೆ ರೋಕೋ

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ತಂದ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ