ರಾಜಕೀಯ
ಜಾತಿ ಆಧಾರದ ಮೇಲೆ ಸಂಘಟನೆ ಬೇಡ, ಮಹಿಳಾ ಶಕ್ತಿ ಆಧಾರದಲ್ಲಿ ಮಾಡಿ: ಡಿಕೆ ಶಿವಕುಮಾರ್
“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಬಂಗಾರಪ್ಪನವರ ಸರ್ಕಾರದಲ್ಲಿ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ: ವಿಜಯಾನಂದ ಕಾಶಪ್ಪನವರ
ಅಧಿವೇಶನ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ, ಸಿಎಂ ಡಿಸಿಎಂ ಬಗ್ಗೆ ನನಗೆ ಗೊತ್ತಿಲ್ಲ ಎಂದು ವಿಜಯಾನಂದ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದ್ದಾರೆ. ಸಂಪುಟ ಪುನಾರಚನೆ ಆಗುತ್ತದೆ, ಸಿಎಂ ಅವರೇ ಹೇಳಿದ್ದಾರೆ, ವರಿಷ್ಠರು ಅನುಮತಿ ಕೊಟ್ಟಿದ್ದಾರೆ. ನಮ್ಮ ಬೇಡಿಕೆಯನ್ನು ನಮ್ಮ ರಾಜ್ಯದ ಸಿಎಂ,
ಕಮಿಷನ್ ದಂಧೆಯಲ್ಲಿ ಸಂಪೂರ್ಣ ಮುಳುಗಿದ ರಾಜ್ಯ ಸರ್ಕಾರ: ಆರ್ ಅಶೋಕ
ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ, ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ.
7 ವರ್ಷದ ಹಿಂದೆ ಆಸ್ಟ್ರೇಲಿಯಾದಲ್ಲಿ 24 ಲಕ್ಷ ರೂಪಾಯಿ ಕೊಟ್ಟು ತಗೊಂಡಿದ್ದೆ: ಡಿಕೆ ಶಿವಕುಮಾರ್
ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ ಕ್ರೆಟಿಡ್ ಕಾರ್ಡ್ ಮೂಲಕ 24 ಲಕ್ಷ ರೂಪಾಯಿ ಕೊಟ್ಟು ಖರೀದಿ ಮಾಡಿದ್ದೇನೆ. ಬೇಕಿದ್ದರೆ ನನ್ನ ಕ್ರೆಡಿಟ್ ಕಾರ್ಡ್ ಪರಿಶೀಲಿಸಿ. ಇದನ್ನು ನನ್ನ ಚುನಾವಣಾ ಅಫಿಡವಿಟ್
ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ
ಡಿಸಿಎಂ ನಿವಾಸದಲ್ಲಿ ಸಿಎಂ ಬ್ರೇಕ್‌ಫಾಸ್ಟ್: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳ ಎದುರಿಸಲು ರಣನೀತಿಗಳ ಚರ್ಚೆ
ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪಾಹಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ , ಉಪಮುಖ್ಯಮಂತ್ರಿಗಳ ಮನೆಯ
ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ
ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ
ರಾಜ್ಯದಲ್ಲಿ ಒಂದೇ ಒಂದು ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭವಾಗಿಲ್ಲ: ಆರ್ ಅಶೋಕ
ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ
ಕಸದ ಮಾಫಿಯಾಕ್ಕೆ ಬಗ್ಗದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ: ಡಿಕೆ ಶಿವಕುಮಾರ್
“ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿ




