ರಾಜಕೀಯ
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ. ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ
ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್
ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ
ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ: ಡಿಕೆ ಶಿವಕುಮಾರ್
ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಗಾಂಧಿ ಭಾರತ ಕಾರ್ಯಕ್ರಮದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಕೆ ಶಿವಕುಮಾರ್
ಬೆಂಗಳೂರು: ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಡಿಸಿಎಂ ಡಿಕೆ ಶಿವಕುಮಾರ್
ಡಿಕೆಶಿ ಬಗ್ಗೆ ಮಾತಾಡೋ ಯತ್ನಾಳ್‌ಗೆ ಉಗೀರಿ ಎಂದ ಶಾಸಕ ಸೋಮಶೇಖರ್
ಯತ್ನಾಳ್‌ಗೆ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಏನು ಸಂಬಂಧ, ಡಿಕೆಶಿ ಬಗ್ಗೆ ಮಾತನಾಡಲು ಯತ್ನಾಳ್‌ಗೆ ಯಾರು ಹೇಳಿದ್ದು, ಯತ್ನಾಳ್‌ಗೆ ಉಗೀರಿ, ಅವರದ್ದೇ ನೋಡಿಕೊಲ್ಳಲು ಅವರಿಗೆ ನೂರೆಂಟು ಇದೆ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಬಿಜೆಪಿ ಬಂಡಾಯ ಶಾಸಕ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ
ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್
ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ
ಸೈಲೆಂಟ್ ಆಗಿ ಹೈಕ್ ಆಯ್ತು ಬಿಯರ್ ರೇಟ್, ಜ.20ರಿಂದ ಜಾರಿ
ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರದಲ್ಲಿ ದುಬಾರಿ ಏರಿಕೆ ಮೂಲಕ ಮದ್ಯ ಪ್ರಿಯರಿಗೆ ಬಿಸಿ ಮುಟ್ಟಿಸಿದೆ. ಬಿಯರ್ ಒಳಗೊಂಡಿರುವ ಆಲ್ಕೋಹಾಲ್ ಅಂಶ ಆಧರಿಸಿ ಪ್ರತಿ ಬಿಯರ್ ಬಾಟಲಿಗೆ
ಬಿಜೆಪಿಯೇತರ ಸರ್ಕಾರಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್
ಕುಂಭಕೋಣಂ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ
ತಮಿಳುನಾಡಿನಲ್ಲಿ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!
ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ
ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು
ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಹಾಜರಾಗುವಂತೆ ಸಿಐಡಿ ನೋಟಿಸ್



