ರಾಜಕೀಯ
ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ
ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು
ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್
“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ
ಬಾಕಿ ಬಿಲ್ ಮೊತ್ತ ಬಿಡುಗಡೆ: ಹೈಕಮಾಂಡ್‌ಗೆ ದೂರು ನೀಡಲು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸುವೆ ಎಂದ ಡಿಸಿಎಂ
ನಾನು ಪ್ರತಿಪಕ್ಷದಲ್ಲಿದ್ದಾಗ ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು
ಚಟುವಟಿಕೆ ನಿಷೇಧ ಜಾರಿ ಮಾಡಿದ್ದೇ ಬಿಜೆಪಿ, ನಾವು ಅನುಷ್ಠಾನಕ್ಕೆ ತರುತ್ತಿದ್ದೇವೆ: ಶರಣುಪ್ರಕಾಶ್ ಪಾಟೀಲ್
ಬೆಂಗಳೂರು, ಆ.18: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ
ಆರ್ ಎಸ್ ಎಸ್ ಟಾರ್ಗೆಟ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂದಾಪುರದಲ್ಲಿ ಆರ್ ಎಸ್
ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ಕಾಯಿರಿ: ಡಿಕೆ ಶಿವಕುಮಾರ್ ಗೆ ಖರ್ಗೆ ಅಭಯ
ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಪವರ್ ಶೇರಿಂಗ್,
ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ರಾಜ್ಯ ಸರ್ಕಾರ
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪಗೆ ನೀಡಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಬಿಜೆಪಿಯ ಈ ಇಬ್ಬರು ನಾಯಕರಿಗೆ ನೀಡಲಾಗಿದ್ದ ಭದ್ರತಾ ವ್ಯವಸ್ಥೆಯನ್ನು ವಾಪಸ್ ಪಡೆದು ಗೃಹ ಇಲಾಖೆ ಶುಕ್ರವಾರ
ಹುಲಿ ದಾಳಿಗೊಳಗಾದ ಮಹದೇವಗೌಡರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ, ಪೂರ್ಣ ಪ್ರಮಾಣದ ಪರಿಹಾರ
ಚಾಮರಾಜನಗರದ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ
ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ
ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ತಮ್ಮ ಬೆಂಗಳೂರಿನ ಗೃಹ ಕಚೇರಿಯಲ್ಲಿ
ಸುಧಾಮೂರ್ತಿ ದಂಪತಿ ಹಿಂದುಳಿದವರ ಸಮೀಕ್ಷೆ ಎಂದು ಭಾವಿಸಿದ್ದರೆ ಅದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ
ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿಯವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು.




