Menu

ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ ನಡೆಸಲಾಗುವುದು. ವಿಷಯವಾರು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಜೂನ್ 9 ರಿಂದ 21ರವರೆಗೆ ಪರೀಕ್ಷೆ -3 ನಡೆಯಲಿದ್ದು, ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಪರೀಕ್ಷೆಗಳಲ್ಲಿ

500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್​​

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ

ಬೆಂಗಳೂರಿನಿಂದ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್‌ 12 ರಂದು ಬೆಂಗಳೂರಿನಿಂದ

ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ,  ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು

ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ

ಸೈಬರ್‌ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್‌ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ

ತಮಿಳುನಾಡು ರಾಜ್ಯಪಾಲ ರವಿ ಕಾರ್ಯವೈಖರಿ ಕಾನೂನು ಬಾಹಿರವೆಂದು ಸುಪ್ರೀಂ ತರಾಟೆ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿ ಯುವ ನಿರ್ಧಾರ ಕೈಗೊಂಡಿರುವುದು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಪ್ಪಿಗೆ ನೀಡದೆ ರಾಜ್ಯಪಾಲರು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್  ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ

ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ