ರಾಜಕೀಯ
ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿಂದುಳಿದವರ-ದಲಿತರ-ಮಹಿಳೆಯರ
“ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು”
ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ, ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ
ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್ ಅಶೋಕ
ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ
ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್ ಲಾಡ್
ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ
ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ
ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ
ಸ್ವಾಮೀಜಿ ಬೀದಿಗೆ ಇಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ಎಂದೂ ಒಕ್ಕಲಿಗ ಸ್ವಾಮೀಜಿ, ಜಾತಿ ಬಳಸಿಕೊಂಡಿಲ್ವಾ?
“ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಛೇಡಿಸಿದ್ದು, ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ ಎಂದು
ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ
“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ
ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ
ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು,
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್ ಅಶೋಕ ಒತ್ತಾಯ
ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ




