Wednesday, November 12, 2025
Menu

ಮತ ಕಳ್ಳತನ ವಿರುದ್ಧ ರಾಜ್ಯದ 1,12,41,000 ಸಹಿ ಎಐಸಿಸಿಗೆ ಹಸ್ತಾಂತರಿಸಿದ ಡಿಕೆ ಶಿವಕುಮಾರ್‌

ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ

ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಸಚಿವ ಜಿ ಪರಮೇಶ್ವರ

ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ

ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ

ಅಧಿಕಾರಿಗಳು ಯಾವುದೇ ಪಕ್ಷದ ಜಾತಿ-ಧರ್ಮದ ಪರವಾಗಿ ವರ್ತಿಸದೆ ವೃತ್ತಿಪರವಾಗಿರಬೇಕು: ಸಿಎಂ

ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ದವಾಗಿ ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ-ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಇರಬೇಕು. ಅಸಮಾನತೆ ಹೋಗಲಾಡಿಸುವುದು

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ, ಜಿಟಿ ದೇವೇಗೌಡಗೆ ಕೊಕ್

ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ

ಜೆಡಿಎಸ್ ರಾಜಕೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ!

ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್

ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ನಾನು ಹೇಳಿದ್ದು: ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ

ಬೆಂಗಳೂರು: ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ

ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ: ಆರ್‌ ಅಶೋಕ

ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ನಾನಾ ಇಲಾಖಾಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ

ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಅಧಿಕಾರಿಗಳು ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರಿಗಳು ಜಿಲ್ಲಾ