ರಾಜಕೀಯ
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಇಸಿ ಮಾಡಬೇಕಾದುದನ್ನೇ ಮಾಡಿದ್ದಾರೆಂದ ಸುಪ್ರೀಂ
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಇಷ್ಟು ತಡವಾಗಿ ಏಕೆ ಪ್ರಾರಂಭಿಸಿಸಲಾಗಿದೆ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಇಸಿ ಸಂವಿಧಾನದ ಅಡಿಯಲ್ಲಿ ಏನು ಮಾಡಬೇಕೋ ಅದನ್ನೇ ಮಾಡಿದ್ದಾರೆ, ಮಾಡಬಾರದ್ದನ್ನೇನು ಮಾಡಿಲ್ಲ ಎಂದು ಹೇಳಿದೆ. ಜೂನ್ 24 ರಂದು ಚುನಾವಣಾ ಆಯೋಗ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಸೂಚನೆಗಳನ್ನು ನೀಡಿತು, ಅನರ್ಹ ಹೆಸರುಗಳನ್ನು ತೆಗೆದುಹಾಕುವ ಮತ್ತು ಅರ್ಹರನ್ನು ಸೇರಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ. ಇದನ್ನು
ಹೈಕಮಾಂಡ್ ನಿರ್ಧಾರಕ್ಕೆ ನಾನು, ಡಿಕೆಶಿ ಇಬ್ಬರೂ ಬದ್ಧ: ಸಿದ್ದರಾಮಯ್ಯ
5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ. ಪವರ್ ಷೇರಿಂಗ್ ವಿಷಯ ಪ್ರಸ್ತಾಪವೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಹಾಗಾಗಿ ಸಿಎಂ ಬದಲಾವಣೆ ವಿಚಾರ
ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ: ದಿನೇಶ್ ಗುಂಡೂರಾವ್
ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಂಡಿಯನ್ ರೆಡ್
ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರಕ್ಕೆ ಚಾಟಿ: ಹೈಕೋರ್ಟ್ ಆದೇಶಕ್ಕೆ ಆರ್.ಅಶೋಕ ಸ್ವಾಗತ
ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್ ಮಧ್ಯಂತರ
ರಾಜ್ಯದ 6 ನೀರಾವರಿ ಯೋಜನೆಗಳಿಗೆ 11,123 ಕೋಟಿ ರೂ. ಅನುದಾನಕ್ಕೆ ಮನವಿ: ಡಿಕೆ ಶಿವಕುಮಾರ್
ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ
ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆ ಶಿವಕುಮಾರ್
ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ
ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ದಾಖಲೆ: ಆರ್. ಅಶೋಕ್ ಟೀಕೆ
ಸಿಎಂ ಸಿದ್ದರಾಮಯ್ಯನವರೇ , ನ್ಯಾಯಾಲಯಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು? ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನಔಷಧಿ ಕೇಂದ್ರಗಳನ್ನು ಮುಚ್ಚಿದ್ದ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿರ್ಣಯಕ್ಕೆ
Yettinahole-ಎತ್ತಿನಹೊಳೆ ಯೋಜನೆ ಆಕ್ಷೇಪಗಳನ್ನು ನಿವಾರಿಸುವುದಾಗಿ ಕೇಂದ್ರ ಸಚಿವರಿಂದ ಆಶ್ವಾಸನೆ: ಡಿಕೆ ಶಿವಕುಮಾರ್
“ಎತ್ತಿನಹೊಳೆ ಯೋಜನೆ ವಿಚಾರವಾಗಿ ಎದುರಾಗಿರುವ ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಸ್ಪಷ್ಟನೆ ನೀಡಿದ್ದು, ಆಕ್ಷೇಪಗಳನ್ನು ನಿವಾರಣೆ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಧಾರವಾಡ ಎಎಸ್ಪಿ ನಾರಾಯಣ ಭರಮನಿ ಕರ್ತವ್ಯಕ್ಕೆ ಹಾಜರು
ಬಹಿರಂಗ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನ ಆಗಿದೆ ಎಂದು ಬೇಸರಿಸಿಕೊಂಡು ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಮೂಲಕ ನಾರಾಯಣ ಬರಮನಿ ಪ್ರಕರಣದಿಂದ ಸಾರ್ವಜನಿಕರ ಆಕ್ರೋಶಕ್ಕೆ
ರಾಜ್ಯದಿಂದ 200ಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡಿಪಾರು
ಈಗಾಗಲೇ ರಾಜ್ಯದಿಂದ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ, ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ(ಎಫ್ಆರ್ಆರ್ಒ)