ರಾಜಕೀಯ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ ನೋಟೀಸ್ ಜಾರಿ ಮಾಡಿದ್ದ ಕೇಂದ್ರೀಯ ಶಿಸ್ತು ಸಮಿತಿ ಇದೀಗ ಯಡಿಯೂರಪ್ಪ ಬಣದ ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಶಾಸಕರಾದ ರೇಣುಕಾ ಚಾರ್ಯ, ಎಸ್.ಟಿ.ಸೋಮಶೇಕರ್, ಶಿವರಾಂ ಹೆಬ್ಬಾರ್, ಮಾಜಿ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ
ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ಸದ್ಯ ನಿರಾಳ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್
ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ವರದಿ ಬಳಿಕ ಸಿಎಂ ಜತೆ ಒಳಮೀಸಲು ಚರ್ಚಿಸಿ ಕ್ರಮ
ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ವಾರದಲ್ಲಿ ನೀಡಲಿರುವ ಮಧ್ಯಂತರ ವರದಿ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಆಯುರ್ವೇದ ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಕೆ ಶಿವಕುಮಾರ್
ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿಶ್ವವಿದ್ಯಾಲಯದ ಪುರುಷ ವಿದ್ಯಾರ್ಥಿನಿಲಯದ
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರರೇ ವಿರೋಧಿಸಿದ್ದರು: ಆರ್.ಅಶೋಕ
ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ
ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್
“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್
ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದು,




