ರಾಜಕೀಯ
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ, ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ
ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ
ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ: ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”
ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್ ದೆಹಲಿಗೆ
“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು: ವ್ಯಾಪಕ ವಿರೋಧ
ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಕನ್ನಡಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಆಕ್ರೋಶ ಹೊರಹೊಮ್ಮಿದೆ. ಈ ವಿಶ್ವವಿದ್ಯಾಲಯವನ್ನು
ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್
“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು
ಸಿದ್ದರಾಮಯ್ಯ ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ ಈ ಬಜೆಟ್ : ಡಿ.ಕೆ. ಶಿವಕುಮಾರ್
“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ನಗರದ ಅತಿ
ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ
“ಹಲಾಲ್ ಬಜೆಟ್” ಬಿಜೆಪಿಯವರ ಕೊಳಕು ಮನಸ್ಥಿತಿ, ದಿವಾಳಿ ಪದದ ಅರ್ಥವೇ ಗೊತ್ತಿಲ್ಲದವರು ಎಂದ ಸಿಎಂ
ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು
ಅಭಿವೃದ್ಧಿಯ ಯೋಜನೆಗಳೇ ಇಲ್ಲದ ಬಜೆಟ್: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ಬಳಿಕ




