Menu

ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು ಸಲ್ಲಿಸಿದ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೇರಿದಂತೆ ಪ್ರಕರಣ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಮಾ.15 ನಂತರ ನೂತನ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ!

ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೊದಲೇ ತೂಕಡಿಸುವ ಜನಪ್ರತಿನಿಧಿಗಳಿಗೆ ಊಟದ ನಂತ್ರ ರಿಕ್ಲೈನರ್ ಚೇರ್‌ ಬೇರೆ ಕೊಡ್ಬೇಕಾ

ಅಧಿವೇಶನಗಳಿಗೆ ಹಾಜರಾಗುವುದಕ್ಕಿಂತ ಮಹತ್ವದ ಕೆಲಸ ಶಾಸಕರಿಗೆ ಬೇರಾವುದಿದೆ,  ಅದಕ್ಕೂ ಗೈರು ಹಾಜರಾಗಿ ಕಲಾಪಗಳಿಗೆ ಚಕ್ಕರ್ ಹೊಡೆಯುತ್ತಾರೆಂದರೆ ಇವರನ್ನು ಆರಿಸಿ ಕಳಿಸುವ ಪ್ರಮೇಯವಾದರೂ ಏನಿದೆ,  ಪ್ರೈಮರಿ ಶಾಲೆಯ ಮಕ್ಕಳು ಕೇವಲ ಎರಡು ಮೂರು ದಿನ ಶಾಲೆಗೆ ಚಕ್ಕರ್ ಹಾಕಿದಲ್ಲಿ ಅವರಿಗೆ ನಾನಾ ರೂಪದ

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿ.ಕೆ. ಶಿವಕುಮಾರ್

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ

ಪರಿಶಿಷ್ಟ ಜಾತಿ, ಪಂಗಡದ ಹಣ ಬಜೆಟ್ ನಲ್ಲಿ‌ಮೀಸಲಿಡಿ: ಶ್ರೀರಾಮುಲು

ಮೈಸೂರು: ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಶೇ24.10ರಷ್ಟು ಹಣ ಮೀಸಲಾಗಿರಿ ಇರಿಸಿ ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು. ಮೈಸೂರು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಎಸ್ ಇಪಿ, ಟಿಎಸ್ ಪಿ ಅನುದಾನ

ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ

ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ

ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83

ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ಜಂಟಿ ಸಂಸದೀಯ ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿದ ಬಳಿಕ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಜಂಟಿ ಸಂಸದೀಯ ಸಮಿತಿ ಫೆ.13ರಂದು ಸಂಸತ್ತಿನಲ್ಲಿ ವರದಿ ಮಂಡಿಸಿತ್ತು. ಈ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ