Menu

ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್‌

ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿ, ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ ಚರ್ಚೆ ಇದೆ ಎಂದು ಕೇಳಿದಾಗ, ಯಾವ ಚರ್ಚೆ, ನಿಮ್ಮ ಬಳಿ ಮಾತಾಡಿರಬಹುದು. ನನ್ನ

ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ

ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ

2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ

ಭಾರತದ ಚುನಾವಣೆಗೆ ಅಮೆರಿಕ ಹಣ ನೀಡಿಲ್ಲ, ಯೋಜನೆಗಳಿಗೆ ಅನುದಾನ ನೀಡಿದೆ: ವಿತ್ತ ಸಚಿವಾಲಯ

ಪ್ರಧಾನಿ ನರೇಂದ್ರ ಮೋದಿ ಅವರಿಗೆ 180 ಕೋಟಿ ರೂ. ಚುನಾವಣಾ ಅನುದಾನವನ್ನು ಅಮೆರಿಕ ನೀಡಿತ್ತು, ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಅಮೆರಿಕ ʻಯುಎಸ್‌ಏಡ್‌ʼ ಮೂಲಕ ನೀಡಿದೆ ಎಂಬ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಭಾರತದ ಹಣಕಾಸು

ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದ ಆರ್‌. ಅಶೋಕ್‌

ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ. ಬೆಂಗಳೂರು ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ

ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ

ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್

ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ

ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು‌. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ

ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ

ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ