ರಾಜಕೀಯ
ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್. ಅಶೋಕ್
ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಕಾಂಗ್ರೆಸ್ ಸರ್ಕಾರ ಕೇಳಿದರೂ ಕೇಳಿಸದಂತೆ ಕಿವುಡಾಗಿದೆ. ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ
ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್ ಕುಮಾರ್ ಬೆಚ್ಚಿ ಬಿದ್ದಿಲ್ಲ: ಸಿಎಂ
ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ
ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ ನಿತಿನ್ ಗಡ್ಕರಿ
ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ
ಜ. 21ಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ
ಡಿಕೆ ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ
ನಮ್ಮ ಡಿನ್ನರ್ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್
ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ
ಜಿ.ಪರಮೇಶ್ವರ್ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್
ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.
ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್
ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ
ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ
ವಿಧಾನಮಂಡಲ ಅಧಿವೇಶನದಿಂದ ಅರ್ಧಕ್ಕೆ ಹೊರಟ ರಾಜ್ಯಪಾಲ ರವಿ!
ಚೆನ್ನೈ: ರಾಜ್ಯ ಸರಕಾರದ ಜೊತೆ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಸೃಷ್ಟಿಸಿಕೊಳ್ಳುತ್ತಲೇ ಬಂದಿರುವ ತಮಿಳುನಾಡು ರಾಜ್ಯಪಾಲ ರವಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡದೇ ಅರ್ಧಕ್ಕೆ ಎದ್ದು ಹೋದ ಘಟನೆ ಪುನರಾವರ್ತಿಸಿದೆ. ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸದ ಕಾರಣ ಶಿಷ್ಟಾಚಾರದ ಉಲ್ಲಂಘನೆಯನ್ನು




