Menu

ಲಾರಿಗಳಿಗೆ ವೆಚ್ಚ ಬಾಕಿ ಉಳಿಸಿದ ಸರ್ಕಾರ: ಅನ್ನಭಾಗ್ಯ ಅಕ್ಕಿ ಸಾಗಾಟ ಬಂದ್

ರಾಜ್ಯದಲ್ಲಿ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಸರ್ಕಾರ ನೀಡಬೇಕಾಗಿದ್ದ ಹಣವನ್ನು ಪಾವತಿಸಿಲ್ಲ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. ಬಾಕಿ ಇದ್ದ ಸಾಗಾಣಿಕೆ ವೆಚ್ಚ ನೀಡುವಂತೆ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರ ಸಂಘ 15 ದಿನ ಗಡುವು ನೀಡಿತ್ತು. ಸರ್ಕಾರ ಸ್ಪಂದಿಸದ ಕಾರಣ ಅನ್ನಭಾಗ್ಯ ಆಹಾರ ಸಾಗಿಸುವ ಲಾರಿಗಳ ಸಂಚಾರ ಬಂದ್ ಮಾಡಲಾಗಿದೆ. ಕರ್ನಾಟಕ

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಇಸಿ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಣೆ

ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನಗರಗಳ ತ್ವರಿತ ಬೆಳವಣಿಗೆ, ವಲಸೆ ಹೆಚ್ಚಿರುವುದು, ಯುವ ಜನರು ಮತದಾನಕ್ಕೆ ಅರ್ಹರಾಗಿರುವುದು ಮತ್ತು ವಿದೇಶಿ

ಬೆಂಗಳೂರು ದಕ್ಷಿಣದಲ್ಲಿ 80 ಎಕರೆ ಸರ್ಕಾರಿ ಜಮೀನು ಮಠಮಾನ್ಯಗಳಿಗೆ ನೀಡಲು ಪರಿಶೀಲನೆ

ಬೆಂಗಳೂರು ದಕ್ಷಿಣ ತಾಲೂಕಿನ ವ್ಯಾಪ್ತಿಯಲ್ಲಿ 80 ಎಕರೆ ಸರ್ಕಾರಿ ಜಮೀನನ್ನು ವಿವಿಧ ಸಮಾಜದ ಮಠಮಾನ್ಯಗಳಿಗೆ ಹಂಚುವ ಬಗ್ಗೆ ಸರ್ಕಾರ ಪರಿಶೀಲಿಸಿದೆ. ವಿವಿಧ ಸಮಾಜದ ಸ್ವಾಮೀಜಿಗಳು ಕೋರಿದಂತೆ ಸಮಾಜದ ಅಭಿವೃದ್ಧಿಗೆ ಅನುದಾನವನ್ನು ನೀಡಲು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕುರುಬ ಸಮಾಜಕ್ಕಾಗಿ

ಪ್ರತಿ ವರ್ಷ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆ

ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು. ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮ ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ

ಹಾಲುಮತದಿಂದ ಅಧಿಕಾರ ಬದಲು ಬಹಳ ಕಠಿಣ: ಅಲೈ ದೇವರ ವಾಣಿ

ಹಾಲು ಮತದ ಕೈಯಲ್ಲಿ ಇರುವ ಅಧಿಕಾರ ಬದಲಾವಣೆ ಅಷ್ಟು ಸುಲಭವಲ್ಲ, ಬಹಳ‌ ಕಠಿಣ ಎಂದು ಕೌಜಗೇರಿ ಗ್ರಾಮದ ಮೊಹರಂ ಹಬ್ಬದ ಆಚರಣೆ ವೇಳೆ ಅಲೈ ದೇವರು ಹೇಳಿದ್ದಾರೆ. ಗದಗದ ರೋಣ ತಾಲೂಕಿನ ಕೌಜಗೇರಿ ಗ್ರಾಮದಲ್ಲಿ ನಡೆದ ದೈವ ಕಾರ್ಣಿಕದಲ್ಲಿ ಅಲೈ ದೇವರು

ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡು ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಒಪ್ಪಿಕೊಂಡಿದ್ದಾರೆ.

ಅಮೆರಿಕ ವಿರೋಧಿ ನೀತಿ ಬೆಂಬಲಿಸಿದರೆ ಬ್ರಿಕ್ಸ್​ ದೇಶಗಳಿಗೆ ಸುಂಕ: ಟ್ರಂಪ್‌ ಎಚ್ಚರಿಕೆ

ಬ್ರಿಕ್ಸ್​ ದೇಶಗಳು ಅಮೆರಿಕ ವಿರೋಧಿ ನೀತಿಯನ್ನು ಬೆಂಬಲಿಸಿದರೆ ಆ ದೇಶಗಳ ಮೇಲೆ ಹೆಚ್ಚುವರಿಯಾಗಿ ಶೇ.10 ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಬ್ರಿಕ್ಸ್​ ಶೃಂಗಸಭೆಯಲ್ಲಿ ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಯನ್ನು ಖಂಡಿಸಿದ ಬಳಿಕ

ಆನ್‌ಲೈನ್ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ತಿದ್ದುಪಡಿ ಮಸೂದೆ

ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದ್ದು, ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್

ವಿರೋಧ ಪಕ್ಷದವರು ಬಾಯಿ ಚಪಲಕ್ಕೆ ಮಾತಾಡುತ್ತಾರೆ: ಡಿಕೆ ಶಿವಕುಮಾರ್‌

ಕಾರ್ಯಕರ್ತರು, ಶ್ರೀಗಳು, ಜನರು ಬಯಸುತ್ತಾರೆ. ಯಾರು ಏನೇ ಬಯಸಿದರು ಅದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನಾವೆಲ್ಲ ಪಕ್ಷ ಕಟ್ಟಿರುವವರು, ಪಕ್ಷದ ಶಿಸ್ತಿನ ಸಿಪಾಯಿಗಳು. ನಾನಾಗಲಿ ಸಿದ್ದರಾಮಯ್ಯ ಅವರಾಗಲಿ ಯಾರೇ ಆಗಿರಲಿ ನಾವೆಲ್ಲರೂ ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಎಂದು

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು: ಡಿಸಿಎಂ

ದೇಶದಲ್ಲಿ ಒಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನಲೆಗೆ  ತರಬೇಕು ಎಂದು ಒಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕನಕಪುರದ ಬಿಜ್ಜಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ