Menu

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಅಂದಿನ ಮುಖ್ಯಮಂತ್ರಿ

ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಮಂಡಿನೋವು ತಪಾಸಣೆ

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ

ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಕರ್ನಾಟಕದ ಸಂಸದರು ಉತ್ತರಿಸಿ: ಡಿಕೆಶಿ ಕಿಡಿ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹರಿಹಾಯ್ದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಪ್ರತಿಕ್ರಿಯೆ

ಮಧ್ಯಮ ವರ್ಗಕ್ಕೆ ಸರ್ ಪ್ರೈಸ್ ಗಿಫ್ಟ್ : ಬಸವರಾಜ ಬೊಮ್ಮಾಯಿ

ನವದೆಹಲಿ: ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ತುಟ್ಟಿ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ ಮಂಡಿಸಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಾಣದ ಗುರಿ ಇದೆ ಎಂದು ಹೇಳಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ ಅವರು

ಇ-ಶ್ರಮ್ ನೋಂದಣಿ: ಗಿಗ್‌ ಕಾರ್ಮಿಕರಿಗೆ ಬಜೆಟ್‌ ಗಿಫ್ಟ್‌

ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರವು ಗುರುತಿನ ಚೀಟಿಗಳು ಮತ್ತು ಇ-ಶ್ರಮ್ ವೇದಿಕೆ ಯಲ್ಲಿ ನೋಂದಣಿಗೆ ವ್ಯವಸ್ಥೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದಾರೆ. ಈ ಮೂಲಕ ಸಚಿವೆ ಬಜೆಟ್‌ನಲ್ಲಿ ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರಿಗೆ ಆರ್ಥಿಕ

 ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರಗಳಿಗೆ ಬ್ರಾಡ್​ಬ್ಯಾಂಡ್ ಸಂಪರ್ಕ

ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಐಐಟಿ ಪಾಟ್ನಾವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದು, ಮುಂದಿನ

12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆದಾರರ ಪಾಲಿಗೆ ಇದೊಂದು ಬಂಪರ್‌  ಎಂದೇ ವಿಶ್ಲೇಷಿಸಲಾಗುತ್ತಿದೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ,

ದೆಹಲಿ ಅಸೆಂಬ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಡಿಕೆಶಿ ಪ್ರಚಾರ

ದೆಹಲಿಯ ಕಸ್ತೂರನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಪರವಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚುನಾವಣೆ ಪ್ರಚಾರ ನಡೆಸಿದರು. ಚುನಾವಣೆ ಪ್ರಚಾರದ ಅಂಗವಾಗಿ ಕ್ಷೇತ್ರದ ತ್ಯಾಗರಾಜ್ ಕಾಲೋನಿಯಲ್ಲಿ ಕ್ರಿಕೆಟ್ ಆಡಿದ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸುವ ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಿರುವ ಹಲವು ಕ್ರಮಗಳನ್ನು ಮಂಡಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಗೆ ಕ್ರಮವು  ಕ್ಯಾನ್ಸರ್‌ ಚಿಕಿತ್ಸೆ ಪಡೆಯುವಲ್ಲಿ ಬಡ ರೋಗಿಗಳಿಗೆ