ರಾಜಕೀಯ
ಕಾರ್ಮಿಕ ಮುಖಂಡ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ
ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಹಾಸನ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಕ್ರೀಡಾ ಪಟುವಿಗೆ ಇರಬೇಕಾದ ಕ್ರೀಡಾ ಮನೋಭಾವ ಮತ್ತು ಬದ್ಧತೆ ಎರಡೂ ಗೋಪಾಲಸ್ವಾಮಿ ಅವರಿಗಿದೆ. ಪ್ರತಿಯೊಬ್ಬರನ್ನೂ
ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು
ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿಕೆ ಶಿವಕುಮಾರ್
ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ
ಮುಖ್ಯಮಂತ್ರಿ- ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ಚರ್ಚೆ
ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್
ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್.ಅಶೋಕ
ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ
ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು
ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸದುಪಯೋಗಪಡಿಸಿಕೊಳ್ಳಿ: ಸಚಿವ ಲಾಡ್
2025-26 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕಾರ್ಮಿಕ
ಕೆಂಪೇಗೌಡರ ಸ್ಮಾರಕ ಅಭಿವೃದ್ಧಿಗೆ ₹103 ಕೋಟಿ, ಕಾಲೇಜು ಸ್ಥಾಪನೆಗೆ ₹100 ಕೋಟಿ: ಡಿಸಿಎಂ
ನಾಡಪ್ರಭು ಕೆಂಪೇಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು ₹103 ಕೋಟಿ ಅನುದಾನ ಹಾಗೂ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು. ಮಾಗಡಿ
ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ
ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ
ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಕಣಕ್ಕಿಳಿಸಿದ ಬಿಜೆಪಿ: ಸುರ್ಜೇವಾಲಾ ತಿರುಗೇಟು
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿ ಎಚ್.ಡಿ.




