Tuesday, December 30, 2025
Menu

ಟನಲ್ ರಸ್ತೆ ಡಿಪಿಆರ್ ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ: ಡಿಕೆ ಶಿವಕುಮಾರ್‌ಗೆ ಕುಟುಕಿದ ಆರ್‌ ಅಶೋಕ

ಡಿಸಿಎಂ ಡಿಕೆಶಿವಕುಮಾರ್ ಸಾರ್ ಯಾಕಿಷ್ಟು ದುಬಾರಿ ಡಿಪಿಆರ್, 2.2 ಕಿ.ಮೀ. ಟನಲ್ ರಸ್ತೆಗೆ ₹1,385 ಕೋಟಿ ಡಿಪಿಆರ್ ಸಿದ್ದಪಡಿಸಲಾಗಿದೆ. ತಾವು ಮಾಡಿಸುವ ಡಿಪಿಆರ್ ಗಳು ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ ಅಥವಾ ಚಿನ್ನದ ಶಾಹಿಯಿಂದ ಮುದ್ರಣ ಆಗುತ್ತೋ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಪ್ರತಿಪಕ್ಷ ನಾಯಕ ಆರ್‌. ಅಶೋಕ ಕುಟುಕಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಡಿಸಿಎಂ @DKShivakumar ಅವರೇ, ಇನ್ನೆಷ್ಟು ಲೂಟಿ ಹೊಡೆಯುತ್ತೀರಿ ಸ್ವಾಮಿ,  ಕನ್ನಡಿಗರನ್ನು

ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ: ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ

ಮಂಡ್ಯದಲ್ಲಿ  ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್ 

ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ

ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಕೇಂದ್ರ ಕ್ರಮ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಮಾಡಿ ಅಶಾಂತಿ ಮೂಡಿಸುವ ಈ ಶಕ್ತಿಗಳ ದಮನಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ‌ ಶಿವಕುಮಾರ್

“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ 

ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ

ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?: ಡಿಕೆ ಶಿವಕುಮಾರ್‌

ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್‌   ತಿರುಗೇಟು

ಮತ ಕಳ್ಳತನ ವಿರುದ್ಧ ರಾಜ್ಯದ 1,12,41,000 ಸಹಿ ಎಐಸಿಸಿಗೆ ಹಸ್ತಾಂತರಿಸಿದ ಡಿಕೆ ಶಿವಕುಮಾರ್‌

ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ

ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಸಚಿವ ಜಿ ಪರಮೇಶ್ವರ

ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ

ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ