ರಾಜಕೀಯ
ಮಾರ್ಚ್ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ
“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಶಿವಕುಮಾರ್ ಅವರು ಸೋಮವಾರ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದರು. “ಬಫರ್ ರಸ್ತೆಗಳು ಬೆಂಗಳೂರಿನ ಪಾಲಿಗೆ ಇತಿಹಾಸ ಸೃಷ್ಟಿ ಮಾಡಲಿರುವ ರಸ್ತೆಗಳಾಗಲಿವೆ. ಕೆರೆಗಳು
ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?
ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ
ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್ ಇ- ಹರಾಜು
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಲೈಸೆನ್ಸ್ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ
ಅಧಿಕಾರ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು : ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ರಾಹುಲ್ ಗಾಂಧಿ ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ.
ಕಾಂಗ್ರೆಸ್ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ
ಕಾಂಗ್ರೆಸ್ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ
ರಾಜ್ಯ ನಾಯಕತ್ವ ಗೊಂದಲ ಹೈಕಮಾಂಡ್ನದಲ್ಲ, ಲೋಕಲ್ನವರ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ಸೃಷ್ಟಿ ಮಾಡಿಲ್ಲ, ಲೋಕಲ್ನವರೇ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ನಾಯಕರೇ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದ್ರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ-ಡಿಸಿಎಂ
ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ, ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ: ಡಿಕೆ ಶಿವಕುಮಾರ್
ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು
ಒಲಂಪಿಕ್ಸ್ ಚಿನ್ನ ಗೆಲ್ಲುವ ಕ್ರೀಟಾಪಟುಗಳಿಗೆ 6 ಕೋಟಿ ರೂ.ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ
ಬೆಂಗಳೂರಿನ ಭವಿಷ್ಯಕ್ಕಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್, ಮೇಲ್ಸೇತುವೆ ಯೋಜನೆ
“ಬೆಂಗಳೂರು ಭವಿಷ್ಯದ ನಗರವಾಗಿ ರೂಪುಗೊಳ್ಳುತ್ತಿದ್ದು, ಇದಕ್ಕಾಗಿ ನಮ್ಮ ಸರ್ಕಾರ ಟನಲ್ ರಸ್ತೆ, ಮೇಲ್ಸೇತುವೆ, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಬಾಲ್ಡ್ ವಿನ್ ಶಾಲೆಯಲ್ಲಿ ಏರ್ಪಡಿಸಿದ್ದ ಯುನೈಟೆಡ್ ಕ್ರಿಸ್ಮಸ್ ಆಚರಣೆಯಲ್ಲಿ ಡಿಸಿಎಂ




