Menu

ತಮಿಳ್ನಾಡು ಅಸೆಂಬ್ಲಿಯಲ್ಲಿ ಭಾಷಣ ಮಾಡದೆ ಹೊರ ನಡೆದ ರಾಜ್ಯಪಾಲರು

ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು ಹೇಳುವುದು ಸತ್ಯಕ್ಕೆ ದೂರವಾಗಿದೆ ಎಂದು ಲೋಕಭವನ ಆರೋಪಿಸಿದೆ. ಈ ವರ್ಷದ ತಮಿಳುನಾಡು ಪ್ರಥಮ ಅಧಿವೇಶನದಲ್ಲಿ ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ರಾಜ್ಯಪಾಲ ಆರ್‌ಎನ್‌ ರವಿ ನಿರಾಕರಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆರ್‌ ಅಶೋಕ ಆಗ್ರಹ

ಬಾರ್, ಪಬ್, ಕ್ಲಬ್‌ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ.ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್ ಹಗರಣ

ಅಬಕಾರಿ ಅಕ್ರಮದಲ್ಲಿ ಹೆಸರು ದುರ್ಬಳಕೆ: ಕಾನೂನು ಕ್ರಮದ ಎಚ್ಚರಿಕೆಯಿತ್ತ ಸಚಿವ ತಿಮ್ಮಾಪೂರ

ಯಾವನೋ ಒಬ್ಬ ಆಡಿಯೋ ದುರುಪಯೋಗ ಮಾಡಿಕೊಂಡು ನನ್ನ ಹಾಗೂ ನನ್ನ ಮಗನ ಹೆಸರನ್ನು ಹೇಳುತ್ತಿದ್ದಾನೆ. ಕೆಲ ಅಧಿಕಾರಿಗಳ ಹೆಸರನ್ನು ತೆಗೆದುಕೊಂಡಿದ್ದಾನೆ. ಅವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ

ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳಿಂದ ವಿರೋಧ ಪಕ್ಷಗಳ ನಾಯಕರ ಬೇಟೆ

ಕಾಂಗ್ರೆಸ್ ಮತ್ತು ಮಿತ್ರಕೂಟ ಮತ್ತು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಅಜೆಂಡಾ ಬಿಜೆಪಿ ಹೊಂದಿರುವುದು ಹೊಸದೇನಲ್ಲ. ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಿಂದಲೂ ದೇಶದಿಂದ ಕಾಂಗ್ರೆಸ್ ಅನ್ನು ಸಂಪೂರ್ಣ ವಾಗಿ ಹೊರದೂಡುತ್ತೇವೆ ಮತ್ತು ಈ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದು ಬಹಿರಂಗವಾಗಿ

15ನೇ ಹಣಕಾಸು ಆಯೋಗದ ಸಾವಿರಾರು ಕೋಟಿ ಹಗರಣ: ಪಿ.ರಾಜೀವ್ ಆರೋಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಾತೆತ್ತಿದರೆ ಸಂವಿಧಾನದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆಯವರಿಗೆ, ತಮ್ಮ ಇಲಾಖೆಯಲ್ಲಿ ಸಂವಿಧಾನದ ಉಲ್ಲಂಘನೆ ಎಷ್ಟಾಗುತ್ತಿದೆ ಎಂದು ತಿಳಿದುಕೊಳ್ಳುವ ಪುರುಸೊತ್ತಿಲ್ಲ ಎಂದು ರಾಜ್ಯ ಬಿಜೆಪಿ

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು

ಜಿಬಿಎ ಚುನಾವಣೆ: ಮತದಾರರ ಕರಡು ಪಟ್ಟಿ ಪ್ರಕಟ, ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

ಜೂನ್‌ 30ರೊಳಗೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಬ್ಯಾಲಟ್‌ ಪೇಪರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮತದಾರರ ಕರಡು ಪಟ್ಟಿ ಪ್ರಕಟ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌.

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ

ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಭಾರತದ ಶೇ 30 ಸುಂಕ ವಾಪಸ್‌ಗೆ ಆಗ್ರಹ

ಕಳೆದ ನವೆಂಬರ್‌ನಲ್ಲಿ ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30 ಸುಂಕ ವಿಧಿಸಿರುವುದನ್ನು ಕಡಿಮೆ ಮಾಡಲು ಮಾತುಕತೆ ನಡೆಸುವಂತೆ ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರಿಗೆ ಒತ್ತಾಯಿಸಿದ್ದಾರೆ. ಮೊಂಟಾನಾ ಮತ್ತು ಉತ್ತರ

ಪ್ರತಿಯೊಂದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದ ಡಿಕೆ ಶಿವಕುಮಾರ್

ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು