ರಾಜಕೀಯ
ಜನಾದೇಶ ಕದಿಯುವ ಪ್ರಜಾರಾಜ್ಯದ ಆತ್ಮ ಘಾಸಿಗೊಳಿಸುವ ವ್ಯವಸ್ಥೆಯಿಂದ ರಕ್ಷಣೆ ನೀಡಲು ಕಾಂಗ್ರೆಸ್ ಮಾತ್ರ ಶಕ್ತ: ಸಿಎಂ ಸಿದ್ದರಾಮಯ್ಯ
ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ, ಮತ್ತು ಅವರ ಸಿದ್ಧಾಂತದ ಗುರುಗಳಾದ RSS ಹತ್ತಿಕ್ಕುತ್ತಿವೆ. ಭಾರತವು ಇಂದು ಆತ್ಮವಂಚನೆಯ ನೆರಳಿನಲ್ಲಿ ಬದುಕುತ್ತಿದೆ. ಸಂಸ್ಥೆಗಳನ್ನು ವಶಪಡಿಸಿಕೊಂಡು,ಸ್ವಾತಂತ್ರ್ಯವನ್ನು
ಬ್ರ್ಯಾಂಡ್ ಅಲ್ಲ, ಬ್ಯಾಡ್ ಬೆಂಗಳೂರು: ರಸ್ತೆ ಗುಂಡಿ ಮುಚ್ಚುವ ಮೂಲಕ ಬಿಜೆಪಿ ವಿನೂತನ ಪ್ರತಿಭಟನೆ
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ದಿನೇದಿನೇ ಹೆಚ್ಚುತ್ತಿದ್ದರೂ ಅವುಗಳನ್ನು ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಬಿಜೆಪಿ ನಗರದೆಲ್ಲೆಡೆ ರಸ್ತೆ ತಡೆ ಪ್ರತಿಭಟನೆ ನಡೆಸಿತು. ಸ್ಥಳೀಯ ನಾಯಕರ ನೇತೃತ್ವದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ರಸ್ತೆ ರೋಕೋ
ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ
ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ತಂದ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ
ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ
ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ
ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರಿತ ಕುಟುಂಬಗಳಿಗೆ 15 ಲಕ್ಷ ಪರಿಹಾರ: ಸಚಿವ ಸಂತೋಷ್ ಲಾಡ್
ಶ್ರಮಿಕ ವರ್ಗಕ್ಕಾಗಿ ಸೆಸ್‌ನಲ್ಲಿ ಹಣವನ್ನು ಮೀಸಲಿಟ್ಟು, ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ಸಮುದಾಯದಲ್ಲಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತ ಕುಟುಂಬಕ್ಕೆ ಇಲಾಖೆಯ ಮೂಲಕ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್! ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕಳೆದ ಎರಡು ತಿಂಗಳಿನಿಂದ ‘ಗೃಹಲಕ್ಷ್ಮಿ ಯೋಜನೆ’ ಹಣ ಬಿಡುಗಡೆಯಾಗದಿರುವುದರಿಂದ, ಹಣದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ತೊಂದರೆ ಉಂಟಾಗಿತ್ತು. ಸರ್ಕಾರ ನೀಡಿದ ವಚನವನ್ನು ಈಡೇರಿಸುತ್ತಿಲ್ಲ ಎಂದು ಬೇಸರ ಹೊರಪಡಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬಾಕಿ ಉಳಿದ ಹಣವನ್ನು ಬಿಡುಗಡೆ
ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ
ನಾಡಹಬ್ಬ ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ತೀರದಲ್ಲಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಂಗಳವಾರ ಮಾಹಿತಿ ಹಂಚಿಕೊಂಡರು. ಸೆಪ್ಟೆಂಬರ್
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಸೇವೆ ಒದಗಿಸಲು ಹೊಸ ಯೋಜನೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ
ಜಾತಿ ಗಣತಿ ಭವಿಷ್ಯ: ಹೈಕೋರ್ಟ್ನಲ್ಲಿ ವಾದ ಪ್ರತಿವಾದ ಹೇಗಿತ್ತು?
ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ನೇತೃತ್ವದ ಪೀಠದಲ್ಲಿ ನಡೆಯಿತು. ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ ವಾದ ಮತ್ತು ಪ್ರತಿವಾದ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025




