ರಾಜಕೀಯ
ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ
ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ, ಆರ್ಥಿಕ ಸಮೀಕ್ಷೆಅವಶ್ಯವಾಗಿದೆ. ಶಾಲೆಗಳಿಗೆ ಅಡ್ಡಿ ಆಗಬಾರದು ಎನ್ನುವ ಕಾರಣದಿಂದ ಜಾತಿವಾರು ಸಮೀಕ್ಷೆಗೆ ದಸರಾ ರಜೆಯನ್ನು ಬಳಸಿಕೊಂಡಿದ್ದೇವೆ. ರಜೆ ಮುಗಿದ ತಕ್ಷಣವೇ ಶಾಲೆಗಳು ಪುನರಾರಂಭ ಆಗಲಿವೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು
ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ
ವಿಪ್ರೊ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕೋರಿ ಸಿಎಂ ಪತ್ರ
ಬೆಂಗಳೂರು ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ತಗ್ಗಿಸಲು ನಿಮ್ಮ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರಿಗೆ ಪತ್ರ
ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಸುಧಾಕರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಬಿಪಿಎಲ್ ಕಾರ್ಡ್: ಅನರ್ಹರ ಪತ್ತೆಗೆ ಹಲವು ಇಲಾಖೆಗಳ ತಂತ್ರಾಂಶ ಸಂಯೋಜನೆ
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳ ರದ್ದತಿಗೆ ಮುಂದಾಗಿರುವ ಸರ್ಕಾರ, ಅನರ್ಹರಿಗೆ ಬಿಪಿಎಲ್ ಕಾರ್ಡ್ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆಯ ಕಾರ್ಯಾಚರಣೆಯಲ್ಲಿ 10.09
ಟೆಕ್ಸಾಸ್ ಹನುಮ ಸುಳ್ಳು ಹಿಂದೂ ದೇವರ ಪ್ರತಿಮೆ ಎಂದ ಟ್ರಂಪ್ ಸಹಚರ
ಅಮೆರಿಕದ ಟೆಕ್ಸಾಸ್ನಲ್ಲಿ ಸ್ಥಾಪಿಸಲಾಗಿರುವ ೯0 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಡ್ರೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ನಾಯಕರೊಬ್ಬರು ಅವಮಾನಿಸಿ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ನಮ್ಮದು ಕ್ರಿಶ್ಚಿಯನ್ ರಾಷ್ಟ್ರ, ಆದರೂ ಸುಳ್ಳು ಹಿಂದೂ ದೇವರ ಪ್ರತಿಮೆಯನ್ನು ಇಲ್ಲೇಕೆ ನಿರ್ಮಿಸಲು
ಪ್ರಧಾನಿ ನಿವಾಸದ ರಸ್ತೆಯಲ್ಲಿರುವ ಗುಂಡಿಗಳನ್ನು ಕೂಡ ಮಾಧ್ಯಮದವರು ನೋಡಿ: ಡಿಕೆ ಶಿವಕುಮಾರ್
ನಾನು ದೆಹಲಿ ಒಂದು ಸುತ್ತು ಬಂದೆ. ಅಲ್ಲಿ ಎಷ್ಟು ರಸ್ತೆಗುಂಡಿಗಳಿವೆ ಹಾಗೂ ಪ್ರಧಾನಮಂತ್ರಿಗಳ ನಿವಾಸದ ರಸ್ತೆಯಲ್ಲಿಯೇ ಎಷ್ಟು ರಸ್ತೆಗುಂಡಿಗಳಿವೆ ಎಂಬುದನ್ನು ಮಾಧ್ಯಮದವರು ಪರಿಶೀಲಿಸಬೇಕು. ಕರ್ನಾಟಕದ ಬಗ್ಗೆ ಮಾತ್ರ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ
ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ
ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ , ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ
ಪ್ರಬಲ ಕೋಮುಗಳಿಗೆ ಕುತ್ತು ತರಲಿದೆಯಾ ಜಾತಿ ಸಮೀಕ್ಷೆ
ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಇದನ್ನು ಸಾಮಾಜಿಕ ಮತ್ತು ಶೈಕ್ಷಣಿಗೆ ಸಮೀಕ್ಷೆ ಎಂದು ಕರೆದಿದ್ದರೂ ಮೂಲತಃ ಇದು ಜಾತಿ ಸಮೀಕ್ಷೆ ಎಂಬುದರಲ್ಲಿ ಸಂದೇಹವಿಲ್ಲ. ಇದುವರೆಗೆ ಲಿಂಗಾಯತರು ಮತ್ತು ಒಕ್ಕಲಿಗರು ಅಧಿಕಾರದಲ್ಲಿ ಪ್ರಾಬಲ್ಯ ಸಾಧಿಸಿಕೊಂಡು ಬಂದಿರುವುದಂತೂ ನಿಜ. ೧೯೩೧ ರ ಗಣತಿಯಲ್ಲಿ ಈ
ನಾನು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇನೆ, ಉಚ್ಚಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ: ಜಯಮೃತ್ಯುಂಜಯ ಸ್ವಾಮೀಜಿ
ಸೃಷ್ಟಿಕರ್ತ ಪರಮಾತ್ಮ, ಪರಮಾತ್ಮನ ಸ್ವರೂಪವಾದ ಭಕ್ತರನ್ನು ಬಿಟ್ಟು, ಯಾರಿಗೂ ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಈ ಜಗತ್ತಿನಲ್ಲಿ ಇಲ್ಲ, ಎಂದು ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ನ




