Menu

ಹಂಗಾಮಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ

ರಾಜ್ಯಸಭೆ ಸದಸ್ಯತ್ವದ ಆಹ್ವಾನ ನಿರಾಕರಿಸಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ ನೀಡಿ ಗೌರವಿಸಿದೆ. ಸಿದ್ದರಾಮಯ್ಯನವರನ್ನು ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿ, ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರ ಈ ಸಮಿತಿ ಸಭೆಯಲ್ಲಿ ಆಗುವುದು. ಹೀಗಾಗಿ ಸಿದ್ದರಾಮಯ್ಯನವರಿಗೆ ಸೂಕ್ತ ಸ್ಥಾನ ನೀಡಲಾಗಿದೆ. ಕಾರ್ಯಕಾರಿ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧ ಸಿಬಿಐ ಚಾರ್ಜ್‌ ಶೀಟ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಜನರ ಹೆಸರು ಈ ಹಗರಣದಲ್ಲಿ ಕೇಳಿಬಂದಿದೆ.

ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್‌ ಇಂದು ಸಂಜೆ ಪ್ರಮಾಣ ವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು (ಜೂನ್ 3) ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ವ ಸಿದ್ಧತೆಗಳು ನಡೆದಿವೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ

ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್‌ ದಾಳಿ

ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ನ ಸಶಸ್ತ್ರ ಪಡೆಗಳು ಹೇಳಿಕೊಂಡಿದೆ, ಆದರೆ ಅಮೆರಿಕ ಸೇನೆಯು ಈ ಎಲ್ಲ ವರದಿಗಳನ್ನು ನಿರಾಕರಿಸಿದೆ.

ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರ ಈಡೇರಿಸುವೆ: ಡಿಕೆ ಶಿವಕುಮಾರ್‌

ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಬದ್ಧನಾಗಿದ್ದೇನೆ, ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ನಿರ್ವಹಿಸಬೇಕು. ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌

ಸ್ಪೀಕರ್‌ ಸ್ಥಾನಕ್ಕೆ ಖಾದರ್‌ ನಾಳೆ ರಾಜೀನಾಮೆ? ಮಂತ್ರಿ ಆಗಲಿದ್ದಾರ?

ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು  ಮೂಲಗಳು

ಆರು ತಿಂಗಳಲ್ಲಿ ವಿಧಾನಮಂಡಲ ಆಗಲಿದೆಯಂತೆ ಪೇಪರ್‌ಲೆಸ್‌

ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್  ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಧಿವೇಶನದ ವೇಳೆ ಸದಸ್ಯರಿಗೆ

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ: ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಜೂನ್‌ ಮೂರರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಸುಗಮ ಸಂಚಾರ ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ

ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.  ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆದಿದ್ದಾರೆ. ಜೂನ್ 4 ಅಣ್ಣಾಮಲೈ ಹುಟ್ಟುಹಬ್ಬ ಇದ್ದು, ಅಂದೇ

ಹುಚ್ಚನಂತೆ ವರ್ತಿಸುತ್ತಿದ್ದಿ, ನಾನಿಲ್ಲದಿದ್ದರೆ ನೀನು ಜೈಲಲ್ಲಿ ಇರುತ್ತಿದ್ದೆ: ನೆತನ್ಯಾಹು ವಿರುದ್ಧ ಟ್ರಂಪ್‌ ಆಕ್ರೋಶ

ನೀನು ಹುಚ್ಚನಂತೆ ವರ್ತಿಸುತ್ತಿದ್ದಿ, ನಾನು ಇರದೆ ಇದ್ದರೆ ಈಗಾಗಲೇ ಜೈಲಿನಲ್ಲಿರುತ್ತಿದ್ದೆ. ನಿನ್ನನ್ನು ನಾನು ಉಳಿಸುತ್ತಿದ್ದೇನೆ. ಈಗ ಎಲ್ಲರೂ ನಿನ್ನನ್ನು ದ್ವೇಷಿಸುತ್ತಿದ್ದಾರೆ. ನಿನ್ನಿಂದ ಇಸ್ರೇಲ್ ಮೇಲಿನ ಜಾಗತಿಕ ಬೆಂಬಲವೂ ಕುಸಿಯುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು