Saturday, February 14, 2026
Menu

ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ

“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಚಳಿಗಾಲದ ಅಧಿವೇಶನದ ಬಗ್ಗೆ ಕೇಳಿದಾಗ, “ಆಡಳಿತ ಪಕ್ಷ, ವಿರೋಧ ಪಕ್ಷ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ

ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್ 

“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ

ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್  ಅಧಿವೇಶನದಲ್ಲಿ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ

ಬೆಳಗಾವಿ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದ ಸಿಎಂ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ  ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿದ ಮುಖ್ಯಮಂತ್ರಿ,  ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು

ವರುಣಾದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿದ್ದ ಮೇಲ್ಮನವಿ: ಸಿಎಂ- ಇಸಿಗೆ ಸುಪ್ರೀಂ ನೋಟಿಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಸಿಎಂ ಸಿದ್ದರಾಮಯ್ಯ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ. ಸುಪ್ರೀಂಕೋರ್ಟ್‌ನ ಈ ಕ್ರಮ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. 2023ರ

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ: ಡಿಕೆ ಶಿವಕುಮಾರ್

“ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು 

ನ್ಯಾಷನಲ್ ಹೆರಾಲ್ಡ್ ಕೇಸ್‌: ಡಿಸಿಎಂ ಆಪ್ತ ಇನಾಯತ್‌ ಅಲಿಗೆ ದೆಹಲಿ ಪೊಲೀಸ್‌ ನೋಟಿಸ್‌

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಮಂಗಳೂರಿನ ಕಾಂಗ್ರೆಸ್‌ ಮುಖಂಡ  ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ