ರಾಜಕೀಯ
ವಿರೋಧ ಪಕ್ಷದವರು ಅಧ್ಯಯನ ಮಾಡದೆ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ: ಸಿಎಂ
ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ. ನಮ್ಮ ಬಜೆಟ್ ತುಂಬಿದ ಕೊಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ
ದಾವಣಗೆರೆ ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಚರ್ಚಿಸಿ ಸರಿ ಮಾಡಲಾಗುವುದು: ಡಿಕೆ ಶಿವಕುಮಾರ್
“ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮಾಧ್ಯಮ ಸಂಸ್ಥೆಯೊಂದರ ಸಮ್ಮೇಳನಕ್ಕಾಗಿ ದೆಹಲಿಗೆ ಆಗಮಿಸಿದ್ದೇನೆ.
ಇರಾನ್ ಮೇಲಿನ ದಾಳಿಗಳಿಗೆ ರಕ್ಷಣಾ ಕಾರ್ಯದರ್ಶಿ ಪೀಟ್ ಹೊಣೆ ಎಂದ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ನಡೆದ ಅಮೆರಿಕ-ಇಸ್ರೇಲ್ ದಾಳಿಗಳಿಗೆ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೊಣೆ ಎಂದು ಹೇಳುವ ಮೂಲಕ ಇಷ್ಟೆಲ್ಲ ಅನಾಹುತಗಳಿಗೆ ಪೀಟ್ ಕಾರಣವೆಂದು ಬೆಟ್ಟು ಮಾಡಿದ್ದಾರೆ. ಅಮೆರಿಕ ಟೆನ್ನೆಸ್ಸೀ ರಾಜ್ಯದ ಮೆಂಫಿಸ್‌ನಲ್ಲಿ ನಡೆದ ದುಂಡುಮೇಜಿನ ಸಭೆಯಲ್ಲಿ ಈ
ಬೆಂಗಳೂರು ನಗರದಲ್ಲಿ ಇ ಖಾತಾ ಮಾಫಿಯಾ, ತೆರಿಗೆ ಪಾವತಿಸಿದರೂ ಮನೆ ಹರಾಜು: ಆರ್ ಅಶೋಕ
ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ʼಬ್ರ್ಯಾಂಡ್ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ ಮನೆ ಹರಾಜು ಹಾಕಲು ಅಧಿಕಾರಿಗಳು ಮುಂದಾಗುತ್ತಿದ್ದಾರೆ ಎಂದು
ಅರಣ್ಯಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಈಶ್ವರ ಖಂಡ್ರೆ
ಮೀಸಲು ಅರಣ್ಯ, ಪರಿಭಾವಿತ ಅರಣ್ಯ, ಸೆಕ್ಷನ್ 4 ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ, ಕಿಶೋರ್ ಕುಮಾರ್ ಪುತ್ತೂರ್
ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಾಯಕ ಮೊಜ್ತಬಾ ಖಮೇನಿ ಅಸ್ತು ?
ಅಮೆರಿಕ ಜೊತೆ ಮಾತುಕತೆ ನಡೆಸಲು ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ ವರದಿಗೆ ಸಂಬಂಧಿಸಿ ಇರಾನ್ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ. ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್, ಇರಾನ್
ಮೋದಿ ಮತ್ತು ನನ್ನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆಗೆ ಹೆಚ್‌ಡಿ ದೇವೇಗೌಡ ತಿರುಗೇಟು
ನಿಜ ಹೇಳಬೇಕು ಎಂದರೆ ನನ್ನ ಮತ್ತು ನರೇಂದ್ರ ಮೋದಿ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ
ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಸಂಪೂರ್ಣ ಸುರಕ್ಷಿತ: 𝗜𝗜𝗦𝗰 ವರದಿ
ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (𝗜𝗜𝗦𝗰) ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ,
ಬಿಜೆಪಿಯವರ ಅಪಪ್ರಚಾರಕ್ಕೆ ಜನರು ಮಣೆ ಹಾಕುವುದಿಲ್ಲ : ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಜನರು ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿಯವರು ನಾಮಪತ್ರ ಸಲ್ಲಿಸಿದ್ದು, ಅವರಿಗೆ ಶುಭ
ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಕೊಡುಗೆಯಿಂದ ಸಮರ್ಥ್ ಗೆಲ್ಲಲಿದ್ದಾರೆ: ಡಿಕೆ ಶಿವಕುಮಾರ್
“ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆ ಉಪಚುನಾವಣೆ




