Menu

ಬಿಜೆಪಿಯವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು: ಡಿಸಿಎಂ

ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ.ಅವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು. ಅವರು ಎಲ್ಲಾ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಬಂದ್ ವೇಳೆಯಲ್ಲಿ, ಗಂಗಾಧರ್ ಕೊಲೆ ಪ್ರಕರಣ ಸೇರಿದಂತೆ ಬೇಕಾದಷ್ಟು ಸಮಯದಲ್ಲಿ ಇದೇ ರೀತಿ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಹೊಣೆ ಹೊರಬೇಕು ಎಂದು

Iran-Israel war: ಇರಾನ್‌ನಲ್ಲಿ ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿಗೆ ಇಸ್ರೇಲ್‌ ವೈಮಾನಿಕ ದಾಳಿ

ಇಸ್ರೇಲ್‌ ವಾಯುಪಡೆ ಟೆಹ್ರಾನ್​​ನಲ್ಲಿರುವ ಇರಾನ್ ಸ್ಟೇಟ್ ಬ್ರಾಡ್​ಕಾಸ್ಟರ್​​ ಏಜೆನ್ಸಿ IRIB ಕಚೇರಿಯಲ್ಲಿ ನಿರೂಪಕಿ ಸುದ್ದಿ ಓದುತ್ತಿರುವಾಗಲೇ ದಾಳಿ ನಡೆಸಿದೆ. ಇದರಿಂದ ಸುದ್ದಿ ಪ್ರಸಾರಕ್ಕೆ ತಡೆಯುಂಟಾಯಿತು.  ಕಚೇರಿ ಮೇಲೆ ನಡೆದ ದಾಳಿಯು ವೀಡಿಯೊದಲ್ಲಿ ದಾಖಲಾಗಿ ಪ್ರಸಾರವಾಗಿದೆ.  ದಾಳಿ ಆಗುತ್ತಿದ್ದಂತೆ ನಿರೂಪಕಿ ಓಡಿ ಹೋಗಿದ್ದಾರೆ.

ಕಾಂಗ್ರೆಸ್‌ನದು ಬಡ ಜನರ ಬದುಕು ಕಟ್ಟುವ ರಾಜಕೀಯ: ಡಿಕೆ ಶಿವಕುಮಾರ್‌

ಇಂದು ಭೂ ಗ್ಯಾರಂಟಿ ಯೋಜನೆ ಮೂಲಕ ಹಟ್ಟಿ, ತಾಂಡಾಗಳ ಸಾವಿರಾರು ಜನರಿಗೆ ಭೂಮಿ ಹಕ್ಕು ಪತ್ರ ನೀಡಿದ್ದೇವೆ. ಈ ಹಿಂದೆ ಬೇರೆ ಯಾವುದೇ ಸರ್ಕಾರ ಇಂತಹ ಕಾರ್ಯಕ್ರಮ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ, ಬಡವರ ಹೊಟ್ಟೆ ತುಂಬಿಸಲು

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಮುಖ್ಯಮಂತ್ರಿ 

ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು  ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27

ಶಾಮನೂರು ಶಿವಶಂಕರಪ್ಪ ಶತಾಯುಷಿ ಆಗಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ

ವಿಮಾನ ದುರಂತದಲ್ಲಿ ನಾವು ರಾಜಕೀಯ ಮಾಡಲ್ಲ,ಅದು ಬಿಜೆಪಿ-ಜೆಡಿಎಸ್ ಕೆಲಸ: ಡಿಕೆ ಶಿವಕುಮಾರ್

ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದ ಬಳಿ

Iran-Israel war: ಯುದ್ಧಪೀಡಿತ ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ  ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ  ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಹಿತಿ ಪಡೆದುಕೊಂಡರು. ನವದೆಹಲಿಯ ತಮ್ಮ

RCB Victory tragedy-ಆರ್‌ಸಿಬಿ ವಿಜಯೋತ್ಸವ ದುರಂತ: ತುರ್ತು ಅಧಿವೇಶನ ಕರೆಯಲು ಆರ್‌.ಅಶೋಕ್‌ ಆಗ್ರಹ

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು

ಶಿವಮೊಗ್ಗ ಜೈಲಿನಲ್ಲೂ ಪೊಲಿಟಿಕಲ್ ಗ್ಯಾಂಗ್ ವಾರ್

ಅಟ್ರಾಸಿಟಿ ಕೇಸ್ ನಲ್ಲಿ ಜೈಲು ಸೇರಿದ್ದ ಭದ್ರಾವತಿಯ ಜೆಡಿಎಸ್ ಕಾರ್ಯಕರ್ತ ಕಿರಣ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಹಲ್ಲೆ ನಡೆಸಿರುವುದಾಗಿ ಭದ್ರಾವತಿಯ ಮಾಜಿ ಶಾಸಕ ಅಪ್ಪಾಜಿಗೌಡರ ಪುತ್ರ ಅಜಿತ್ ಗೌಡ ಆರೋಪಿಸಿದ್ದು, ಫೇಸ್ಬುಕ್‌ನಲ್ಲಿ ಹಲ್ಲೆಯ ವೀಡಿಯೊ ಪೋಸ್ಟ್‌ ಮಾಡಿದ್ದಾರೆ.

PM Modi: ಕೆನಡಾ ಸೇರಿ ಮೂರು ರಾಷ್ಟ್ರಗಳಿಗೆ ಇಂದಿನಿಂದ ಪ್ರಧಾನಿ ಮೋದಿ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಕೆನಡಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸವನ್ನು ಇಂದು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಆಪರೇಷನ್ ಸಿಂಧೂರದ ಬಳಿಕ ಪ್ರಧಾನಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ. ಮೆಡಿಟರೇನಿಯನ್ ರಾಷ್ಟ್ರಗಳಾದ ಸೈಪ್ರಸ್ ಮತ್ತು ಕ್ರೊಯೇಷಿಯಾ ದೇಶಕ್ಕೂ ಮೋದಿ ಭೇಟಿ