Wednesday, December 31, 2025
Menu

ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕ್ಷೇತ್ರದ ಜನರಿಗೆ ತೇಜಸ್ವಿ ಸೂರ್ಯ ಕರೆ ನೀಡಲಿ

ಸಂಸದ  ತೇಜಸ್ವಿ ಸೂರ್ಯರು ತಮ್ಮ ಕ್ಷೇತ್ರದ ಜನರಿಗೆ, ನೀವು ನಿಮ್ಮ ಕಾರುಗಳನ್ನು ಮನೆಯಲ್ಲೇ ನಿಲ್ಲಿಸಿ, ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ ಮಾಡಿ ಕರೆ ನೀಡಲಿ. ಆಗ ಯಾರು ಪಾಲನೆ ಮಾಡುತ್ತಾರೆ ನೋಡೋಣ. ಕಾರಿಲ್ಲದ ಹುಡುಗನ ಮನೆಗೆ ಹೆಣ್ಣು ನೀಡಲು ಹಿಂದೇಟು ಹಾಕುತ್ತಾರೆ. ಇಂತಹ ಸಾಮಾಜಿಕ ಬಾಧ್ಯತೆಗಳ ಬಗ್ಗೆ ಅವರಿಗೆ ಅರಿವಿಲ್ಲ ಎಂದು ಡಿಸಿಎಂ ಡಿಕೆ ಶಿಚಕುಮಾರ್‌ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ

ಯಾವುದೇ ಕಾರಣಕ್ಕೂ ಪೊಲೀಸರು ರಾಜಕೀಯ ಹಿಂಬಾಲಕರಾಗಬೇಡಿ: ಡಿಕೆ ಶಿವಕುಮಾರ್‌

“ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮ ವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ

ಆರೆಸ್ಸೆಸ್‌ ಚಟುವಟಿಕೆ ನಿರ್ಬಂಧ: ಹೈಕೋರ್ಟ್‌ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್‌

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು

ಡ್ರಗ್ಸ್ ಮುಕ್ತ ಕರ್ನಾಟಕ ಸಾಧಿಸಿ ತೋರಿಸಿ: ಪೊಲೀಸ್‌ಗೆ ಸಿಎಂ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ.

ಯಾರೇ ದ್ವೇಷ ಭಾಷಣ ಮಾಡಿದರೂ ಎಫ್‌ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.  ಕಲ್ಲಡ್ಕ ಪ್ರಭಾಕರ್ ಭಟ್ ಅವರ

ಒಂದು ಲೇಯರ್‌ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಆರ್‌.ಅಶೋಕ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು

ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ

2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ  ಪೌರಾಯುಕ್ತ ವೆಂಕಟೇಶ ನಾಗನೂರು  ಹೇಳಿದ್ದಾರೆ.  ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು  ಮಾಹಿತಿ ನೀಡಿದರು.

ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್,

ಯೋಜನಾ ವರದಿ ಧಾರವಾಡ  ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್‌

ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು

ಮುಖ್ಯಮಂತ್ರಿ ಸ್ಥಾನ: ಸಿಎಂ ಹೇಳಿದ ಮೇಲೆ ಇನ್ನೇನಿದೆ ಎಂದ ಡಿಕೆ ಶಿವಕುಮಾರ್

“ಸಿಎಂ  ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ