ರಾಜಕೀಯ
ಬಿಜೆಪಿಯಿಂದ ರಾಜ್ಯದಲ್ಲಿ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಸಿಎಂ ಸಿದ್ದರಾಮಯ್ಯ
ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು. ಇದರ ವಿರುದ್ಧ ರಾಜ್ಯದಲ್ಲಿ ಈವರೆಗೆ ಸುಮಾರು 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿಯ ಇಂದಿರಾ ಭವನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಗ್ರಹಿಸಿರುವ 1 ಕೋಟಿಗೂ ಅಧಿಕ ಸಹಿ ಸಂಗ್ರಹವನ್ನು ನವೆಂಬರ್ 10ರೊಳಗೆ ದೆಹಲಿ ಎಐಸಿಸಿ ಕಚೇರಿಗೆ ಕಳುಹಿಸಿಕೊಡಲಾಗುವುದು ಎಂದರು. ಮೊದಲ ಬ್ಯಾಚ್ ಸಹಿ ಸಂಗ್ರಹವನ್ನು ದೆಹಲಿಗೆ ಕಳುಹಿಸುತ್ತೇವೆ.
ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ
ಸ್ಥಳೀಯ ಭಾಷೆ ಗೊತ್ತಿರುವವರನ್ನೇ ಬ್ಯಾಂಕ್‌ಗಳು ನೇಮಕ ಮಾಡಿಕೊಳ್ಳಬೇಕು: ಸಚಿವೆ ನಿರ್ಮಲಾ
ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲೇ ಅವರ ವೃತ್ತಿಪರತೆ ಅಳೆಯಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸ್ಥಳೀಯ ಭಾಷೆಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳು ನೇಮಕಾತಿ ಹಾಗೂ ಮಾನವ ಸಂಪನ್ಮೂಲ ನೀತಿಗಳಲ್ಲಿ
ನಾವು ರೈತರ ಪರ, ರೈತರ ಬೇಡಿಕೆ ಈಡೇರಿಕೆಯಲ್ಲಿ ಕೇಂದ್ರದ ಜವಾಬ್ದಾರಿ ಪ್ರಮುಖ, ಕಾರ್ಖಾನೆಗಳ ಜವಾಬ್ದಾರಿಯೂ ಇವೆ: ಸಿಎಂ
ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ವಿಧಾನಸೌಧ
ಮತಗಳವು ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಡಿಕೆ ಶಿವಕುಮಾರ್
“ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಹರಿಯಾಣದಲ್ಲಿ ನಡೆದಿರುವ ಮತಗಳ್ಳತನ ವಿಚಾರವಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೀರಾ ಎಂದು ಕೇಳಿದಾಗ,
ಸರ್ಕಾರ ಪ್ರತಿ ಟನ್ ಕಬ್ಬಿಗೆ 500 ರೂ. ಸಹಾಯಧನ ನೀಡಲಿ: ಆರ್. ಅಶೋಕ
ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಬೆಳಗಾವಿ,
ನಿರ್ಲಜ್ಜತೆಯಿಂದ ಸುಳ್ಳು ಹೇಳುವಾಗ ಪ್ರಹ್ಲಾದ್ ಜೋಷಿ ಸಚಿವ ಸ್ಥಾನದ ಮರ್ಯಾದೆ ಗಮನಿಸಬೇಕಿತ್ತು: ಸಿಎಂ
ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಷಿ ಗಮನದಲ್ಲಿಡಬೇಕಿತ್ತು. ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ
2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೇ ಕ್ರಾಂತಿ: ಡಿಕೆ ಶಿವಕುಮಾರ್
“ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್
ಸಂಪನ್ಮೂಲ ಕ್ರೋಢೀಕರಣ ಸಮಿತಿಯ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ
ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳನ್ನು
ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ: ಆರ್.ಅಶೋಕ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ




