Menu

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು  ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು

ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್‌ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆ ಶಿವಕುಮಾರ್ 

ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು  ಅರಮನೆ ಮೈದಾನದಲ್ಲಿ ಭಾನುವಾರ ನಡೆದ

ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು: ಪ್ರಧಾನಿ ಮೋದಿ

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳ ಬಲಪಡಿಸುವಿಕೆ ಮತ್ತು ಮುಂದುವರಿಸುವಿಕೆ ಭಾರತದ ಬದ್ಧತೆಯಾಗಿದೆ. ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’ :  ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ: ಬಾನು ಮುಷ್ತಾಕ್  ಉದ್ಘಾಟಿಸುವುದು ಸೂಕ್ತವೆಂದ ಸಿಎಂ

ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು  ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿದ್ದರಾಮಯ್ಯ

ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ 

ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ:  ಡಿಕೆ ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್