Menu

ನನ್ನ ಪರ ಯಾರೂ ದೆಹಲಿಗೆ ಹೋಗ್ಬೇಕಿಲ್ಲ, ನಾವು ಹಳಬರಾಗಿದ್ದೇವೆ, ಹೊಸಬರಿಗೆ ಮಂತ್ರಿಯಾಗುವ ಆಸೆ: ಡಿಕೆ ಶಿವಕುಮಾರ್

“ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಗುರುವಾರ ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ  ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ ಅಧಿಕಾರ, ಹುದ್ದೆ ಬೇಕು

2028ರ ವೇಳೆಗೆ 50 ಸಾವಿರ ವಿದ್ಯಾರ್ಥಿಗಳಿಗೆ ಎವಿಜಿಸಿ-ಎಕ್ಸ್ ಆರ್ ತರಬೇತಿ; ಡಿಸಿಎಂ

ಎವಿಜಿಸಿ- ಎಕ್ಸ್ ಆರ್ ವಿಭಾಗದಲ್ಲಿ 2028 ರ ವೇಳೆಗೆ ಸುಮಾರು 50,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.  70% ಉದ್ಯೋಗಿಗಳು ಸೃಜನಶೀಲ ವೃತ್ತಿಪರರಾಗಿದ್ದಾರೆ. ಈ ಮೂಲಕ, 2028 ರ ವೇಳೆಗೆ 30,000 ಕ್ಕೂ ಹೆಚ್ಚು ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವ

ಮಾಜಿ ಸಿಎಂ ದಿ. ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಫೂರ್ತಿ: ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ

ಕಮಿಶನ್‌ ಆಸೆಗಾಗಿ ಕ್ರೀಡಾಂಗಣ, ಕೆಎಸ್‌ಐಸಿ ಮುಚ್ಚಿಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ

ಕಮಿಶನ್‌ ಆಸೆಗಾಗಿ ಹಾಗೂ ಕೆಎಸ್‌ಐಸಿ ಮುಚ್ಚಿಹಾಕಲು ಕಾರ್ಖಾನೆಯ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು.

GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ, ಒಂದು ನಾಗರಿಕತೆಗೆ ನೀಡಿರುವ ಅವಕಾಶ: ಸಿಎಂ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿ, GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ; ಇದು ಒಂದು ನಾಗರಿಕತೆಗೆ ನೀಡಿರುವ ಅವಕಾಶ. ಇದು ಯುವಜನರಿಗೆ ತಮ್ಮ ಕಲ್ಪನಾಶಕ್ತಿಯನ್ನು ಜೀವನೋಪಾಯವಾಗಿ ಪರಿವರ್ತಿಸಲು , ಕಥೆಗಾರರಿಗೆ ತಮ್ಮ ಕಥಾನಿರೂಪಣೆಗೆ ಡಿಜಿಟಲ್

56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ

ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ರಾಜ್ಯದ ನಾನಾ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಉದ್ಯೋಗ ನೇಮಕಾತಿ ಸಂಬಂಧ ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಇರುವ ಸಾಧಕ ಭಾಧಕಗಳ ಬಗ್ಗೆ

21 ಕೋಟಿ ರೂ. ಗ್ಯಾರಂಟಿ ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿಸಿಎಂ

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ, ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ  ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ

ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್‌ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದಿದ್ದಾರೆ. ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್ ಶಾಸಕರಲ್ಲಿ 31 ಮಂದಿ

ಅಧಿಕಾರದಲ್ಲಿದ್ದಾಗ ಕೆಲಸ ಮಾಡದ ಬಿಜೆಪಿಯವರಿಂದ ಈಗ ಪ್ರತಿಭಟನೆ: ಸಿಎಂ

ತನ್ನ ಅಧಿಕಾರಾವಧಿಯಲ್ಲಿ  ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸ ಮಾಡದೆ ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ