Thursday, September 18, 2025
Menu

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಮುಖ್ಯಮಂತ್ರಿ

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿದ ಬಳಿಕ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ  ಮುಖ್ಯಮಂತ್ರಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು

ಉಕ್ರೇನ್‌ ವಿರುದ್ಧ ಯುದ್ಧಕ್ಕೆ ರಷ್ಯಾ ಸೇನೆಗೆ ಭಾರತೀಯರ ನೇಮಕ: ಎಚ್ಚರಿಕೆ ನೀಡಿದ ವಿದೇಶ ಸಚಿವಾಲಯ

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡಲು ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ಈ ಯೋಚನೆ ಬಿಟ್ಟು ಬಿಡಿ, ಇದು ತುಂಬಾ ಅಪಾಯಕಾರಿ ನಿರ್ಧಾರವಾಗುತ್ತದೆ ಎಂದು ವಿದೇಶ ಸಚಿವಾಲಯ ಎಚ್ಚರಿಕೆ ನೀಡಿದೆ. ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ವಿಷಯ ಚರ್ಚಿಸಿ.

ಪ್ರಚೋದನಕಾರಿ ಭಾಷಣ: ಸಿಟಿ ರವಿ ವಿರುದ್ಧ ಪ್ರಕರಣ ದಾಖಲು

ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ

ವೇದಿಕೆಯಲ್ಲಿದ್ದ ಟ್ರಂಪ್‌ ಅತ್ಯಾಪ್ತನಿಗೆ ಗುಂಡಿಟ್ಟು ಹತ್ಯೆ

ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಅಧ್ಯಕ್ಷ ಟ್ರಂಪ್‌ ಅವರ ಅತ್ಯಾಪ್ತ ಚಾರ್ಲಿ ಕಿರ್ಕ್‌ನನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ. ಗುಂಡಿನ ದಾಳಿಯ ನಂತರ ವಿವಿ ಕ್ಯಾಂಪಸ್‌ ಅನ್ನು ಸೀಲ್ ಮಾಡಿದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಟರ್ನಿಂಗ್

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್ : ಡಿಕೆ ಶಿವಕುಮಾರ್ ವಾಗ್ದಾಳಿ

“ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ಎಂದು ಡಿಸಿಎಂ ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ  ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಇಂದು ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ‌ ಡಿಕೆ ಶಿವಕುಮಾರ್  ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದ ಅವರು, “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ  ಸೂಚನೆ

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ:  ಡಿಕೆ ಶಿವಕುಮಾರ್ 

“ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತರಾಟೆಗೆ ತೆಗೆದುಕೊಂಡಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು  ಪ್ರತಿಕ್ರಿಯಿಸಿದರು. ಮದ್ದೂರು ಗಣೇಶ ವಿಸರ್ಜನೆ