Saturday, September 26, 2026
Menu

ಸರ್ಕಾರದಲ್ಲಿ ಹಣವಿಲ್ಲ, ಘೋಷಣೆ ಮಾಡುತ್ತಾರೆ, ಯಾವುದೂ ಜಾರಿಯಾಗಲ್ಲ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಏನೋ ಸಾಧನೆ ಮಾಡುತ್ತೇವೆ ಎಂದುಕೊಂಡು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಮಾಡಿದೆ. ಆದರೆ ಯಾವುದೇ ಯೋಜನೆಗಳು ಕರಾವಳಿಗೆ ಸಿಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಮಾಗಡಿಯಲ್ಲಿ ಬಿಜೆಪಿಯ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ  ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಏನೋ ಸಾಧನೆ ಮಾಡುತ್ತೇವೆ ಎಂದುಕೊಂಡು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಮಾಡಿದೆ. ಹಿಂದಿನ ಸಿಎಂ ಸಿದ್ದರಾಮಯ್ಯ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ

ಅಧಿಕಾರಿಗಳ ಜೊತೆ ಚರ್ಚಿಸಿ ಕಸ್ತೂರಿ ರಂಗನ್ ವರದಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ

ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿ ಜಿಲ್ಲೆಯ

ತುಳು 2ನೇ ಅಧಿಕೃತ ರಾಜ್ಯ ಭಾಷೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಘೋಷಣೆ

ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆ ಎಂದು ಘೋಷಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಸಿಎಂ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ

ಮಾಧ್ಯಮಗಳು ಕಟ್ಟಕಡೆಯ ಮನುಷ್ಯನ ಧ್ವನಿಯಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಮಾಧ್ಯಮರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಕಟ್ಟಕಡೆಯ ಮನುಷ್ಯ, ಬಡವರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಅವರ ಕಷ್ಟ-ಸುಖಗಳನ್ನು ಮಾಧ್ಯಮಗಳು ಸಮಾಜದ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ

ಪಿಕ್‌ ಪಾಕೆಟ್‌ನಲ್ಲಿ ಕೇಂದ್ರ ಸಚಿವರಿಗೆ ಪಿಹೆಚ್‌ಡಿ ನೀಡಬೇಕಿದೆ: ಸಿಎಂ ಡಿಕೆ ಶಿವಕುಮಾರ್‌

ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ. ಶಿಕ್ಷಕರಿಗೆ Tr. ಎಂಜಿನಿಯರ್ ಗಳಿಗೆ Er. ಪದನಾಮ ನೀಡಿರುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವರಿಗೂ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ ನೀಡಬೇಕಿದೆ ಎಂದು ಸಿಎಂ

ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆ ಶಿವಕುಮಾರ್

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ಸಿಎಂ ವಿಶೇಷ ಪ್ರಾರ್ಥನೆ

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ

ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ತೆರವುಗೊಳಿಸಿದ ಕಲಬುರಗಿ ಜಿಲ್ಲಾಡಳಿತ

ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಮಾಡಿರುವ ಘಟನೆ ನಡೆದಿದೆ. ಸಿಎಂ ಡಿ.ಕೆ ಶಿವಕುಮಾರ ಅವರು ಕಲಬುರಗಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆಯಾ ಎಂಬ ಆನುಮಾನ ಮೂಡಿದೆ. ಆದರೆ ಯಾವುದೇ

ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ ನಿಂದ: ಸಿಎಂ ಡಿಕೆ ಶಿವಕುಮಾರ್‌

ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್‌ನಿಂದ, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಕಲ್ಯಾಣ ಕರ್ನಾಟಕಕ್ಕೆ ನಿಜಾಮರು ಸ್ವಾತಂತ್ರ್ಯ ಕೊಟ್ಟಿರಲಿಲ್ಲ. ಆಗ ಕಾಂಗ್ರೆಸ್ ಹೋರಾಟದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಬಂತು.  ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನು ಕಾಪಾಡಿದರು. ಧರಂಸಿಂಗ್