ರಾಜಕೀಯ
ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್
“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬಿಡದಿ
ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ
ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ
35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ
ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿಕೆ ಸುರೇಶ್
ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ
ಬಿಡದಿ ಟೌನ್ ಶಿಪ್ ಯೋಜನೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಆರ್.ಅಶೋಕ
ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ
ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2 ಸಾವಿರ ರೂ. ಏರಿಕೆ
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಮಾಸಿಕವಾಗಿ ತಲಾ ₹2,000 ಗಳಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು
ಭಾರತಕ್ಕೆ ತಲೆಬಾಗಿದ ಪಾಕ್‌ನಿಂದ ಮಾತುಕತೆಗೆ ಆಹ್ವಾನ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಪಡೆಯು ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಕೊನೆಗೂ ಭಾರತಕ್ಕೆ ಶರಣಾಗಿದೆ. ಪಾಕಿಸ್ತಾನ ಶಾಂತಿ ಸ್ಥಾಪನೆ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್ ಶರೀಫ್ ಭಾರತದ ಮುಂದೆ ಮಾತುಕತೆ ಪ್ರಸ್ತಾಪ
ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯರಿಗೆ ಏನೂ ಮಾಡಲೂ ಸಾಧ್ಯವಿಲ್ಲ: ಬೈರತಿ ಸುರೇಶ್
ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.




