Menu

ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್​ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್​ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸಂಸತ್ತಿಗಿಂತ ಮೇಲಿನವರಾ ಎಂದು ಪ್ರಶ್ನಿಸಿದ್ದಾರೆ. ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಬುಧವಾರ ನಸುಕಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುತಾಣ ಗುರಿಯಾಗಿಸಿಕೊಂಡು

ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್‌ ಅಹ್ಮದ್‌

ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ. 

ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್

ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ

ಉಗ್ರರ ನೆಲೆಗಳ ಮೇಲೆ ದಾಳಿ  ಬಳಿಕ ಕೇಂದ್ರ ಸರ್ಕಾರದ  ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ

ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್‌ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ

‘ಆಪರೇಷನ್ ಸಿಂಧೂರ್ ‘ ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್ ಅಹಮದ್ 

ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್  ಅಭಿನಂದನೆ

“ಆಪರೇಷನ್ ಸಿಂಧೂರ್” ಬಳಿಕ ರಾಜ್ಯದ ಡ್ಯಾಂ, ಏರ್‌ಪೋರ್ಟ್‌ಗಳಿಗೆ ಬಿಗಿ ಭದ್ರತೆ: ಸಚಿವ ಪರಮೇಶ್ವರ್‌

ಭಾರತದ ವಾಯುಪಡೆಯು ಉಗ್ರರ ತಾಣಗಳ ಮೇಲೆ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರದ ಸೂಚನೆಯನ್ವಯ  ರಾಜ್ಯದಲ್ಲೂ ನಾಗರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಡ್ಯಾಮ್‌ಗಳಿಗೆ ಹೆಚ್ಚಿನ ಭದ್ರತೆ

ಆಪರೇಷನ್ ಸಿಂಧೂರ್‌: ಉಗ್ರರ ನೆಲೆಗಳ ನಾಶ, ಸೇನಾಪಡೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದೇಶದ ಸೇನಾಪಡೆಯು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ,  ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸೇನೆಯನ್ನು ಅಭಿನಂದಿಸಿದ ಮುಖ್ಯಮಂತ್ರಿ,  ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ

ʻಆಪರೇಷನ್‌ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ

ʻಆಪರೇಷನ್‌ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ

ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಯ್ತು “ಸಿಂಧೂರ್”, ಅರ್ಥಕ್ಕಾಗಿ ಸರ್ಚ್‌

ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿರುವ ಭಾರತ ವಾಯುಪಡೆ ನಡೆಸಿರುವ ಭಯೋತ್ಪಾದಕರ ತಾಣಗಳ ಮೇಲಿನ ದಾಳಿ ” ಆಪರೇಷನ್‌ ಸಿಂಧೂರ್‌” ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಗಿದೆ. ಅಲ್ಲಿನ ಜನತೆ ಸಿಂಧೂರ್ ಪದದ ಅರ್ಥವೇನು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಗೂಗಲ್‌ನಲ್ಲಿ ವಾಯುದಾಳಿ, ಭಾರತೀಯ ಸೇನೆ, ಭಾರತ