Menu

ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದು ಹೇಳಿದರು. ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ

ಸಂವಿಧಾನದ ಆಶಯ ಜಾರಿಗೆ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಸ್ವಯಂ ಪ್ರಶ್ನಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಗೃಹಲಕ್ಷ್ಮೀ ಸಹಾಯಧನ ಸಾಲಕ್ಕೆ ಕಡಿತಗೊಳಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನವನ್ನು ಖಾಸಗಿ ಫೈನಾನ್ಸ್‌ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ

ಮೊದಲು ಲೆಬನಾನ್‌ನಲ್ಲಿ ಕದನ ವಿರಾಮ ಘೋಷಿಸಿ, ಮತ್ತೆ ಶಾಂತಿ ಮಾತುಕತೆ: ಅಮೆರಿಕಕ್ಕೆ ಸೆಡ್ಡು ಹೊಡೆದ ಇರಾನ್‌

ಇರಾನ್‌- ಅಮೆರಿಕ ಕದನ ವಿರಾಮದ ಮಧ್ಯೆಯೇ ಇಸ್ರೇಲ್‌ ಲೆಬನಾನ್‌ ಮೇಲೆ ತೀವ್ರ ದಾಳಿಗಳನ್ನು ನಡೆಸಿ 300 ಕ್ಕೂ ಹೆಚ್ಚು ಜನ ಮೃತಪಟ್ಟಿರುವುರಿಂದ ಕೆರಳಿರುವ ಇರಾನ್‌, ಲೆಬನಾನ್‌ನಲ್ಲಿ ಕದನ ವಿರಾಮ ಆಗುವವರೆಗೆ ಇಸ್ಲಾಮಾಬಾದ್‌ನಲ್ಲಿ ಅಮೆರಿಕದೊಂದಿಗೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಧಿಕೃತವಾಗಿ ಪಾಕಿಸ್ತಾನಕ್ಕೆ

ಬಂಗಾಳದಲ್ಲಿ ಮಹಿಳೆಯರಿಗೆ, ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ ರೂ.: ಬಿಜೆಪಿ ಘೋಷಣೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರತಿ ತಿಂಗಳು ಮಹಿಳೆಯರಿಗೆ 3 ಸಾವಿರ ರೂ., ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ

ಆಳುವ ಸರ್ಕಾರಕ್ಕೆ ಅವಕಾಶ ವಂಚಿತರ ಪರ ಕಾಳಜಿಯಿರಬೇಕು: ಪ್ರಿಯಾಂಕ್ ಖರ್ಗೆ

ಆಳುವ ಸರ್ಕಾರಕ್ಕೆ ಸಾಮಾಜಿಕ ಬದ್ದತೆ ಇರಬೇಕು. ಅವಕಾಶವಂಚಿತರಿಗ ಬಗ್ಗೆ ಕಾಳಜಿ ತೋರಿಸಿ. ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಅದಕ್ಕೆ ಆಳುವವರಿಗೆ ಶ್ರೀಮಂತ ಹೃದಯವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಅನುಮತಿಯಿಲ್ಲದೆ ಹರ್ಮುಜ್‌ ಜಲಸಂಧಿಗೆ ಬರುವ ಹಡಗು ಹೊಡೆದುರುಳಿಸುತ್ತೇವೆ: ಇರಾನ್‌

ಅಮೆರಿಕ-ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬಳಿಕ ಲೆಬೆನಾನ್ ಮೇಲೆ ಇಸ್ರೇಲ್ ಸೇನೆ 100ಕ್ಕೂ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಟ 250 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಮಧ್ಯೆ ಇರಾನ್ ನೌಕಾಪಡೆಯು ಹರ್ಮುಜ್ ಜಲಸಂಧಿಯ ಬಳಿಯ

ಕದನ ವಿರಾಮ ಮುರಿಯುವವರೆಗೆ ಮಾತ್ರ ಇರಾನ್‌ ಸುರಕ್ಷಿತ: ಟ್ರಂಪ್‌ ವಾರ್ನ್‌

ಕದನ ವಿರಾಮ ಮುರಿಯುವ ತನಕ ಮಾತ್ರ ಇರಾನ್‍ನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸುರಕ್ಷಿತವಾಗಿ ಇರಲಿವೆ. ಒಪ್ಪಂದ ಮುರಿದ ಕ್ಷಣದಿಂದಲೇ ದೊಡ್ಡ ದಾಳಿ ನಡೆಯಲಿದೆ. ಆ ದಾಳಿ ಹಿಂದೆಂದಿಗಿಂತಲೂ ಭೀಕರವಾಗಿ ಇರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಚಾರಣಿಗರಿಗೆ ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ ಸುರಕ್ಷತೆ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ, ಚಾರಣಿಗರ ಮೊಬೈಲ್‌ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಿಂದ ರಾತ್ರಿ ಕೋಟ್ಯಾಂತರ ರೂ. ಹಂಚಿಕೆ: ಚರಂತಿಮಠ ಆರೋಪ

ಬಾಗಲಕೋಟೆ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ