ರಾಜಕೀಯ
ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ
ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ಕ್ಷೇತ್ರ ಬಸವನಬಾಗೇವಾಡಿಯಿಂದ ಸ್ಪರ್ಧಿಸುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಅವರ ವಿರುದ್ಧ
ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿತ್ತು: ಆರ್ ಅಶೋಕ
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ
ಕೇಂದ್ರದಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ: ಡಿಸಿಎಂ ಶಿವಕುಮಾರ್
“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ
ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ: ಬಿವೈ ವಿಜಯೇಂದ್ರ
ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ
ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ
ರಾಹುಲ್ ಗಾಂಧಿಯ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್
ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ
ರಾಜ್ಯ ಮಟ್ಟದ ಸಮೀಕ್ಷೆ ವಿಶ್ವಾಸಾರ್ಹವಲ್ಲ, ರಾಷ್ಟ್ರೀಯ ಗಣತಿಯಿಂದ ಪಾರದರ್ಶಕ ದತ್ತಾಂಶ
ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ
ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿ ಮೇ ಅಂತ್ಯದವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ
ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ
ಪಾಕ್ ವಿಮಾನಗಳಿಗೆ ಭಾರತದ ವಾಯು ಪ್ರದೇಶದಲ್ಲಿ ನಿಷೇಧ
ಪಹಲ್ಗಾಂವ್ ನಲ್ಲಿ ಉಗ್ರರ ದಾಳಿಯ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಾಳಿಯ ಬಳಿಕ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು
ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್
ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ




