Thursday, September 18, 2025
Menu

ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ  ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ 

ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 38 ಕೋಟಿ ರೂ. ಇದೆ.

ಕತಾರ್‌ನಲ್ಲಿ ಇಸ್ರೇಲ್‌ ಪಡೆ ವೈಮಾನಕ ದಾಳಿ: ಹಮಾಸ್‌ ನಾಯಕನ ಮಗ ಸೇರಿ ಆರು ಮಂದಿ ಸಾವು

ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ

ಸಿಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿ

ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ 15ನೇ ಉಪರಾಷ್ಟ್ರಪತಿ. ರಾಧಾಕೃಷ್ಣನ್ ಅವರು ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು

ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ

ಮದ್ದೂರಿನ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ  21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ

ಸೋಷಿಯಲ್‌ ಮೀಡಿಯಾ ಬ್ಯಾನ್‌ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ

ನೇಪಾಳದಲ್ಲಿ ಸೋಷಿಯಲ್‌ ಮೀಡಿಯಾಗಳ ಬ್ಯಾನ್‌ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ

ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005

ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್

ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ