ರಾಜಕೀಯ
ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್ ಅಶೋಕ
ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ
ಕೆಪಿಸಿಸಿ ಅಧ್ಯಕ್ಷತೆ ಜೊತೆಗೆ ಬಿಕೆ ಹರಿಪ್ರಸಾದ್‌ಗೆ ಮತ್ತೆ ಎಂಎಲ್ಸಿ ಸ್ಥಾನ
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ
ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್
ಕಾಂಗ್ರೆಸ್ ಕಾರ್ಯಕರ್ತರು ಎಸ್ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ, ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು. ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ
ಯುವ ಸಮುದಾಯಕ್ಕೆ ಉದ್ಯೋಗ ತರಬೇತಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಎಂ
ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6 ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್
ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ
ಡಿಕೆ ಶಿವಕುಮಾರ್ ಸಂಪುಟದ 13 ಸಚಿವರ ಪ್ರಮಾಣ ವಚನ ಇಂದು
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಹಂಗಾಮಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಅವರ
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ಸಚಿವರಾಗುತ್ತಿರುವ ಹಿನ್ನೆಲೆ ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಗೆ
ಹಂಗಾಮಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ
ರಾಜ್ಯಸಭೆ ಸದಸ್ಯತ್ವದ ಆಹ್ವಾನ ನಿರಾಕರಿಸಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ ನೀಡಿ ಗೌರವಿಸಿದೆ. ಸಿದ್ದರಾಮಯ್ಯನವರನ್ನು ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಕಾರ್ಯಕಾರಿ ಸಮಿತಿ ಪಕ್ಷದ
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧ ಸಿಬಿಐ ಚಾರ್ಜ್ ಶೀಟ್
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಜನರ ಹೆಸರು ಈ ಹಗರಣದಲ್ಲಿ ಕೇಳಿಬಂದಿದೆ.
ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಇಂದು ಸಂಜೆ ಪ್ರಮಾಣ ವಚನ
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು (ಜೂನ್ 3) ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ವ ಸಿದ್ಧತೆಗಳು ನಡೆದಿವೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ




