Menu

ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರ ಬಳಕೆ, ದಲಿತರ ಜಾತಿನಿಂದನೆ ಒಳಗೊಂಡಂತೆ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪಗಳಿವೆ. ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ, ಜಾಮೀನು ಪಡೆದು ಹೊರ ಬಂದಿದ್ದಾರೆ. ನಂತರ ಬಜೆಟ್ ಅಧಿವೇಶನದಲ್ಲೂ

ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ: ಡಿಕೆ ಶಿವಕುಮಾರ್

ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು

ಶೇಖ್ ಹಸೀನಾಗೆ ರೆಡ್ ನೋಟಿಸ್‌ ನೀಡುವಂತೆ ಬಾಂಗ್ಲಾ ಸರ್ಕಾರ ಮನವಿ

ಬಾಂಗ್ಲಾದೇಶದಿಂದ ತಪ್ಪಿಸಿಕೊಂಡು ಭಾರತಕ್ಕೆ ಬಂದಿದ್ದ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ರೆಡ್ ನೋಟೀಸ್ ನೀಡುವಂತೆ ಇಂಟರ್​​ಪೋಲ್​​ಗೆ ಮನವಿ ಮಾಡಲಾಗಿದೆ. ಬಾಂಗ್ಲಾದೇಶ ಪೊಲೀಸ್​​ನ ನ್ಯಾಷನಲ್ ಸೆಂಟ್ರಲ್ ಬ್ಯೂರೋ ಈ ಮನವಿ ಸಲ್ಲಿಸಿದೆ ಎಂದು ಬಾಂಗ್ಲಾದೇಶದ ದಿ ಡೈಲಿ ಸ್ಟಾರ್ ಪತ್ರಿಕೆ

ಕಾಂಗ್ರೆಸ್‌ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ: ಆರ್‌.ಅಶೋಕ್‌

ಯಾದಗಿರಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಸಿಐಡಿ ಬಿ ರಿಪೋರ್ಟ್ ನೀಡಿ ಬಚಾವ್ ಮಾಡಿದ್ದು, ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ರಕ್ಷಣೆ ಕೊಡುವುದಿಲ್ಲ, ದಲಿತರನ್ನು ಉಳಿಸುವುದಿಲ್ಲ ಎನ್ನುವುದನ್ನು ಪದೇ

ಶೂದ್ರರು ವಿದ್ಯಾವಂತರಾಗಿ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್

ಮುಖಂಡರಂತೆ ಪಕ್ಷಗಳ ಕಾರ್ಯಕರ್ತರಲ್ಲೂ ಗೆಳೆತನವಿರಲಿ

ರಾಜಕೀಯ ನೇತಾರರು ಚುನಾವಣೆಯ ನಂತರದಲ್ಲಿ ಗಳಸ್ಯ ಕಂಠಸ್ಯ ಸ್ನೇಹಿತರಾಗುವಾಗ ಕಾರ್ಯಕರ್ತರಲ್ಲಿ ಮಾತ್ರ ದ್ವೇಷವೇಕೆ? ಆದ್ದರಿಂದ ಪ್ರತಿಯೊಬ್ಬರು ನಾಗರಿಕ ಸಮಾಜದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಒಂದಾಗುವುದು ಅವಶ್ಯವಿದೆ. ರಾಜಕೀಯ ಏನೇ ಇರಲಿ ವೈಯಕ್ತಿಕ ಸಂಬಂಧಗಳು ಗಟ್ಟಿಯಾಗಿರಬೇಕು. ವೈಯಕ್ತಿಕ ದ್ವೇಷಗಳಿಗೆ ಸಂಬಂಧಗಳನ್ನು ಬಲಿ ಕೊಡಬಾರದು.

ಸಿದ್ದರಾಮಯ್ಯ ಗ್ಯಾಂಗ್‌ ಎಲ್ಲೋ ಕುಳಿತು ರೂಪಿಸಿದ ಜಾತಿ ಗಣತಿ ಅವೈಜ್ಞಾನಿಕ: ಆರ್‌.ಅಶೋಕ

ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ

ರಾಜ್ಯದಲ್ಲೂ ಮಡಿವಾಳ ಸಮುದಾಯ ಎಸ್ಸಿಗೆ ಸೇರ್ಪಡೆ ಸಂಬಂಧ ಸಿಎಂ ಜತೆ ಚರ್ಚೆ: ಡಿಕೆ ಶಿವಕುಮಾರ್‌

17 ರಾಜ್ಯಗಳಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ, ನಮ್ಮ ರಾಜ್ಯದಲ್ಲೂ ಸೇರಿಸಬೇಕು ಎಂದು ಕೇಳಿದ್ದೀರಿ. ಮುಖ್ಯಮಂತ್ರಿಗಳು ಹಾಗೂ ನಾವು ಮುಂದಿನ ದಿನಗಳಲ್ಲಿ ಈ ವಿಚಾರ ಚರ್ಚೆ ಮಾಡುತ್ತೇವೆ. ಈ ಸಮುದಾಯದಿಂದ ಕೆಲವೇ ಕೆಲವರು ಮಾತ್ರ ಅಧಿಕಾರಿಗಳಿದ್ದಾರೆ. ನಿಮ್ಮಲ್ಲಿ ಬಹುತೇಕರು ಕುಲಕಸುಬು ಬಿಟ್ಟಿಲ್ಲ.