Tuesday, November 18, 2025
Menu

ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ: ಸಿಎಂ

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು

ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಹೋರಾಟ: ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಡಿಸಿಎಂ ತಿರುಗೇಟು

“ವಿರೋಧ ಪಕ್ಷಗಳು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹೋರಾಟ, ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ,ಮಾಡಲಿ ಬಿಡಿ”ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು  ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ

ಮೆಟ್ರೋ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಟೆಂಡರ್ : ಡಿ.ಕೆ.ಶಿವಕುಮಾರ್

“ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳೊಂದಿಗೆ  ಮಾತನಾಡಿದರು. “ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ

ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಗೆ ಮರಳಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಅಪ್ಪ ಕಳ್ಳ, ಮಗ ಸುಳ್ಳ ಇದಾನೆ. ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ಅಧಿಕಾರ ಪಡೆದಿದ್ದಾರೆ. ವಿಜಯೇಂದ್ರ ಯಾವತ್ತೂ ಸಿಎಂ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ.

ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನ ಹೋರಾಟಕ್ಕೆ ಬಿಎಸ್​​ವೈ, ಡಿವಿಎಸ್ ಕರೆ

ಬೆಂಗಳೂರು: ರಾಮನವಮಿ ದಿನವಾದ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿ ವೈಮನಸ್ಸು ಬದಿಗಿಟ್ಟು ಒಟ್ಟಾಗಿ ಹೋರಾಡುವಂತೆ ಪಕ್ಷದ ಮುಖಂಡರು,ಕಾರ್ಯಕರ್ತರಿಗೆ ಕರೆ ನೀಡಿದರು.‌ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ

ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ

ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು

ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ

ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ

ವಕ್ಫ್ ತಿದ್ದುಪಡಿ: ಭಾರತದ ನೆಲದಲ್ಲಿ ಸಂವಿಧಾನವೇ ಸಾರ್ವಭೌಮ

ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನದ ೧೪ನೇ ವಿಧಿಯ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಿಯಮದ ಪಾಲನೆಗಾಗಿ ಸಂಸತ್ತಿನ ವಕ್ಫ್ ತಿದ್ದುಪಡಿ ವಿಧೇಯಕವು ಅಂಗೀಕೃತವಾಗಿ ಕಾಯಿದೆಯಾಗಿ ರೂಪುಗೊಳ್ಳುತ್ತಿದೆ. ಭಾರತದ ನೆಲದಲ್ಲಿ ಯಾವುದೇ ವೈಯಕ್ತಿಕವಿರಬಹುದು ಅಥವಾ ಇನ್ನಾವುದೇ ಕಾಯಿದೆಗಳು ಸಂವಿಧಾನಕ್ಕಿಂತ ದೊಡ್ಡವಲ್ಲ. ಸಂವಿಧಾನದಡಿ ಸೃಜನೆಗೊಂಡ

ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್

ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ