ರಾಜಕೀಯ
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸ್ಮಾರ್ಟ್ ಕಾರ್ಡ್
ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ತುಮಕೂರುನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು
ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್ ಲಾಡ್
ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ
ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಟನಲ್ ರಸ್ತೆ ಹೊರತು ಪರ್ಯಾಯ ಏನಿದೆ: ಡಿಸಿಎಂ
ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆಯೆಂಬುದು ನಿಜ. ಹಾಗಾದರೆ ಸಾರ್ವಜನಿಕ ಸಾರಿಗೆಗೆ ಇನ್ನು ಎಷ್ಟು ವಾಹನ ಸೇರಿಸಬೇಕು, 1 ಸಾವಿರ ಸಾಕೇ, ನಾನು ಸೇರಿಸಲು ಸಿದ್ಧ. ಜನರೆಲ್ಲರೂ ಬಸ್ ನಲ್ಲಿ ಪ್ರಯಾಣ ಆರಂಭಿಸುತ್ತಾರಾ, ಹೀಗಾಗಿ ಟನಲ್ ಹೊರತಾಗಿ ಪರ್ಯಾಯ ಪರಿಹಾರ ಏನಿದೆ, ಇದೇ
ಜಿಬಿಎ ಪಾಲಿಕೆಗಳಲ್ಲಿ ಶೇ.50 ಮಹಿಳಾ ಕಾರ್ಪೊರೇಟರ್‌ಗಳು: ಡಿಕೆ ಶಿವಕುಮಾರ್
ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)
ಅರಣ್ಯ ಉಳಿದರೆ ಭೂಮಿ ಉಳಿಯುತ್ತದೆ, ಪ್ರಾಣಿ ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ
ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ
ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ
ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ
ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ
ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ
ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್ ಪುಂಗಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು




