Tuesday, November 18, 2025
Menu

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಹೋಳಿಗೆ!” ಎಂದು ಟೀಕಿಸಿದ್ದಾರೆ. ರಾಜ್ಯದಲ್ಲಿ

ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್‌ ರಾಜಣ್ಣ

ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ

ಶಾಸಕ ಯತ್ನಾಳ್‌ ಉಚ್ಚಾಟನೆ ಖಂಡಿಸಿ ರಾಜೀನಾಮೆ ನೀಡಿದ್ದ ಬೆಂಬಲಿಗ ಅಪಘಾತದಲ್ಲಿ ಸಾವು

ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿದ್ದ ಬೆಂಬಲಿಗ ಸಂತೋಷ್​ ತಟಗಾರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬುಧವಾರ ಆದೇಶ

ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ

ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್‌

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್‌ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್‌ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ

ಸಿಎಂ ಆಗಲೆಂದು ಸತೀಶ್‌ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ

ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18

ಚಾಮರಾಜನಗರ ಆಕ್ಸಿಜನ್ ದುರಂತ; ನೋಟಿಸ್ ಗೆ ಉತ್ತರಿಸದ 29 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸಚಿವ ಸಂಪುಟ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ಸತ್ಯವಂತರಿಗೆ ಕಾಲವಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಂಗಳೂರು:ಸತ್ಯವಂತರಿಗಿದು ಕಾಲವಲ್ಲ ಎಂದು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಷದ‌ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು

ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು