ರಾಜಕೀಯ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?
ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ ಮೂಲಕ ಇತಿಹಾಸ ನಿರ್ಮಾಣವಾಗಲಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, 2019ಕ್ಕೆ ಅವಧಿ ಮುಕ್ತಾಯವಾಗಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಅವಧಿ ವಿಸ್ತರಣೆ ಮಾಡಲಾಗಿತ್ತು.
ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ
ಹನಿಟ್ರ್ಯಾಪ್ ವಿಚಾರದಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು ಕಾಣುತ್ತಿ ದ್ದೇವೆ.
ಕರ್ನಾಟಕದ ಹನಿಟ್ರ್ಯಾಪ್ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ
ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ಸದ್ಯ ನಿರಾಳ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್
ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ವರದಿ ಬಳಿಕ ಸಿಎಂ ಜತೆ ಒಳಮೀಸಲು ಚರ್ಚಿಸಿ ಕ್ರಮ
ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ವಾರದಲ್ಲಿ ನೀಡಲಿರುವ ಮಧ್ಯಂತರ ವರದಿ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಆಯುರ್ವೇದ ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಕೆ ಶಿವಕುಮಾರ್
ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿಶ್ವವಿದ್ಯಾಲಯದ ಪುರುಷ ವಿದ್ಯಾರ್ಥಿನಿಲಯದ
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರರೇ ವಿರೋಧಿಸಿದ್ದರು: ಆರ್.ಅಶೋಕ
ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ




