Tuesday, November 18, 2025
Menu

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು  ಬಿಜೆಪಿ-ಜೆಡಿಎಸ್  ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್

“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ

ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್

ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದ್ದು,

ನಾನು ಸಿಎಂ ಆಗುವುದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವ ಕುರಿತು ಹೈಕಮಾಂಡ್ ಜೊತೆ ಆಗಿರುವ ಮಾತುಕತೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ಆದರೆ 2028ರಲ್ಲಿ ನನ್ನ ನಾಯಕತ್ವದಲ್ಲೇ ಪಕ್ಷ ಚುನಾವಣೆ ಎದುರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮುಂದಿನ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ದಿಢೀರ್ ರಾಜೀನಾಮೆ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ದಿಢೀರನೆ ಬಸವರಾಜ್‌ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಬಸವರಾಜ

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ 

“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ

ಅಮೆರಿಕ ವಲಸಿಗರಿಗೆ ಕಾನೂನು ರಕ್ಷಣೆಯ ಕಾಯ್ದೆ ರದ್ದುಗೊಳಿಸಿದ ಟ್ರಂಪ್‌

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ವಲಸಿಗರ ಕನಸಿಗೆ ಮತ್ತೊಮ್ಮೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆಯನ್ನು ರದ್ದುಗೊಳಿಸುವುದಾಗಿ ಅಮೆರಿಕ ಶುಕ್ರವಾರ ಹೇಳಿದ್ದು, ಅವರಿಗೆ ದೇಶ ತೊರೆಯಲು ವಾರಗಳ ಕಾಲಾವಕಾಶ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು

ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್

ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ

ಹೊಸ ಸಾರಥಿಗೆ ಬಿಜೆಪಿಯಲ್ಲಿ ಹುಡುಕಾಟ ಚುರುಕು: ಮೋದಿ ಮಾತೇ ಅಂತಿಮ

ಮೂರು ರಾಜ್ಯಗಳ ಚುನಾವಣಾ ವಿಜಯದ ನಂತರ, ಜಗತ್ ಪ್ರಕಾಶ್ ನಡ್ಡಾ ಅವರ ಉತ್ತರಾಧಿಕಾರಿಯಾಗಿ ಪಕ್ಷದ ಹೊಸ ಅಧ್ಯಕ್ಷರ ಹುಡುಕಾಟವನ್ನು ಬಿಜೆಪಿ ತೀವ್ರಗೊಳಿಸಿದೆ. ಬಿಜೆಪಿ ಮುಖ್ಯಸ್ಥರ ಅಧಿಕಾರಾವಧಿ ಮೂರು ವರ್ಷಗಳು, ಆದರೆ ನಡ್ಡಾ ಅವರು ೨೦೧೯ರಿಂದ ಸುದೀರ್ಘ ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದಾರೆ,

ಹನಿಟ್ರ್ಯಾಪ್ ಪ್ರಕರಣ ; ಪಾರದರ್ಶಕ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ವಿಧಾನಸೌಧ ದೇವಾಲಯದಂತೆ. ಇಂತಹ ದೇವಾಲಯದಲ್ಲಿ ವಿಷಯಾಧಾರಿತ ಚರ್ಚೆ ನಡೆಯಬೇಕು.‌ ಇತ್ತೀಚೆಗೆ ಸರ್ಕಾರದ ಪ್ರಭಾವಿ ಸಚಿವರ ಸದಸನದೊಳಗೆ ಹನಿಟ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದನ್ನ ನೋಡಿದ್ರೆ ಈ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಪಾರದರ್ಶಕ